ಮುಳ್ಳೇರಿಯ: ಜಿಲ್ಲೆಯಲ್ಲಿ ಸಾವಯವ ಕೃಷಿಯನ್ನು ಅತ್ಯುತ್ತಮವಾಗಿ ಅನುಷ್ಠಾನಗೊಳಿಸಿದ ಪ್ರಶಸ್ತಿಯನ್ನು ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್ ಅವರಿಂದ ಕಾರಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಗೋಪಾಲಕೃಷ್ಣನ್ ಸ್ವೀಕರಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ರೈತರನ್ನು ಮತ್ತೆ ಸಾವಯವ ಕೃಷಿಗೆ ಕರೆತರುವ ತರಬೇತಿ ಹಾಗೂ ಜೀವವೈವಿಧ್ಯ ಸಂರಕ್ಷಣೆಗೆ ಅಳವಡಿಸಿಕೊಂಡ ವಿಧಾನಗಳ ತರಬೇತಿಗಾಗಿ ಕಾರಡ್ಕ ಗ್ರಾಮ ಪಂಚಾಯಿತಿಗೆ ಎರಡನೇ ಅತ್ಯುತ್ತಮ ಸಾವಯವ ಕೃಷಿ ಪಂಚಾಯಿತಿ ಪ್ರಶಸ್ತಿ ಲಭಿಸಿದೆ.