ಕೊಟ್ಟಾಯಂ: ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಎರುಮೇಲಿ ಪೊಲೀಸ್ ಇನ್ಸ್‌ಪೆಕ್ಟರ್ ಮನೋಜ್ ಮ್ಯಾಥ್ಯೂ ಮತ್ತು ಕೊಟ್ಟಾಯಂ ಪೂರ್ವ ಪೊಲೀಸ್ ಠಾಣೆಯ ಚಾಲಕ ಬಿಜಿ. ಅವರನ್ನು ಅಮಾನತುಗೊಳಿಸಲಾಗಿದೆ.
ಶಬರಿಮಲೆ ಪರ್ವಕಾಲ ಸಂದರ್ಭದಲ್ಲಿ ಎರುಮೇಲಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಹಣ ವಸೂಲಿ ಮಾಡಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಎರುಮೇಲಿ ಪೊಲೀಸ್ ಇನ್ಸ್‌ಪೆಕ್ಟರ್ ಮನೋಜ್ ಮ್ಯಾಥ್ಯೂ ಅವರನ್ನು ಅಮಾನತುಗೊಳಿಸಲಾಗಿದೆ. ಇವರ ವಿರುದ್ಧ ದಕ್ಷಿಣ ವಲಯ ಐಜಿ ಕ್ರಮ ಕೈಗೊಂಡು ಆದೇಶ ಹೊರಡಿಸಿದ್ದಾರೆ.