ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ 5.7 ತೀವ್ರತೆಯ ಭೂಕಂಪನ ಸಂಭವಿಸಿದೆ. ಆದರೆ ಯಾವುದೇ ಪ್ರದೇಶದಲ್ಲಿಯೂ ಸಾವು ನೋವು, ಆಸ್ತಿ ಹಾನಿ ಆದ ವರದಿಗಳಿಲ್ಲ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ 5.7 ತೀವ್ರತೆಯ ಭೂಕಂಪನ ಸಂಭವಿಸಿದೆ. ಆದರೆ ಯಾವುದೇ ಪ್ರದೇಶದಲ್ಲಿಯೂ ಸಾವು ನೋವು, ಆಸ್ತಿ ಹಾನಿ ಆದ ವರದಿಗಳಿಲ್ಲ.
'ಶನಿವಾರ ಬೆಳಗ್ಗೆ 9.45 ಗಂಟೆಗೆ ಮಧ್ಯಮ ತೀವ್ರತೆಯ ಕಂಪನ ಸಂಭವಿಸಿದೆ' ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಅಫ್ಗಾನಿಸ್ತಾನ-ತಜಕಿಸ್ತಾನ್ ಗಡಿಯ, 181 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರಬಿಂದುವನ್ನು ಗುರತಿಸಲಾಗಿದೆ.