ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,99,054 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 895 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,22,72,014ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,02,874ಕ್ಕೆ ಏರಿಕೆಯಾಗಿದೆ.
ಇನ್ನು ಭಾರತದಲ್ಲಿ ಒಂದೇ 11,56,363 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 74,15,61,587 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,69,63,80,755ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.