HEALTH TIPS

‘ಝಡ್’ ಭದ್ರತೆ ತಿರಸ್ಕರಿಸಿದ ಅಸಾದುದ್ದೀನ್ ಓವೈಸಿ, ಯುಎಪಿಎ ಅಡಿ ಪ್ರಕರಣ ದಾಖಲಿಸುವಂತೆ ಸರ್ಕಾರಕ್ಕೆ ಒತ್ತಾಯ

            ನವದೆಹಲಿ: ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಎರಡನೇ ಅತ್ಯುನ್ನತ ಝಡ್ ವರ್ಗದ ಭದ್ರತೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.

               ಗುರುವಾರ ರಾತ್ರಿ ಉತ್ತರ ಪ್ರದೇಶದ ಮೀರತ್‌ನ ಕಿತೌಧ್ ಪ್ರದೇಶದಲ್ಲಿ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಒಂದು ದಿನದ ನಂತರ ಕೇಂದ್ರ ಸರ್ಕಾರ ಅವರಿಗೆ ‘ಝಡ್’ ಭದ್ರತೆಯ ಪ್ರಸ್ತಾಪ ಮಾಡಿತ್ತು. ಆದರೆ ಓವೈಸಿ ಅದನ್ನು ತಿರಸ್ಕರಿಸಿದ್ದಾರೆ. 

           ಲೋಕಸಭೆಯಲ್ಲಿ “ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಬಳಸುತ್ತಿರುವ ಕಠಿಣ ಭಯೋತ್ಪಾದನಾ-ವಿರೋಧಿ ಕಾನೂನನ್ನು ಉಲ್ಲೇಖಿಸಿ ಮಾತನಾಡಿದ ಓವೈಸಿ, ನನಗೆ ಝಡ್ ಕೆಟಗರಿ ಭದ್ರತೆ ಬೇಡ. ನಿಮ್ಮೆಲ್ಲರಿಗೂ ಸಮಾನವಾಗಿ ಎ ಕೆಟಗರಿ ಪ್ರಜೆಯಾಗಲು ನಾನು ಬಯಸುತ್ತೇನೆ. ನನ್ನ ಮೇಲೆ ಗುಂಡು ಹಾರಿಸಿದವರ ವಿರುದ್ಧ ಯುಎಪಿಎ(ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ) ಏಕೆ ಜಾರಿ ಮಾಡಿಲ್ಲ? ಎಂದು ಪ್ರಶ್ನಿಸಿದರು.

          “ನನಗೆ ಬದುಕಬೇಕು, ಮಾತನಾಡಬೇಕು. ಬಡವರು ಸುರಕ್ಷಿತವಾಗಿದ್ದಾಗ ನನ್ನ ಜೀವನ ಸುರಕ್ಷಿತವಾಗಿರುತ್ತದೆ. ನನ್ನ ಕಾರಿನ ಮೇಲೆ ಗುಂಡು ಹಾರಿಸಿದವರಿಗೆ ನಾನು ಹೆದರುವುದಿಲ್ಲ. ಆದರೆ ಅವರ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಬೇಕು ಎಂದು ಓವೈಸಿ ಒತ್ತಾಯಿಸಿದರು.

           ಉತ್ತರ ಪ್ರದೇಶದಲ್ಲಿ ಚುನಾವಣೆಗೆ ಕೇವಲ ಒಂದು ವಾರ ಬಾಕಿ ಇರುವಾಗ ಗುರುವಾರ ರಾತ್ರಿ ನಡೆದ ದಾಳಿಯನ್ನು ಪರಿಶೀಲಿಸಿ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಅವರಿಗೆ ಝಡ್ ಕೆಟಗರಿ ಭದ್ರತೆಯನ್ನು ಒದಗಿಸಲು ಸರ್ಕಾರ ನಿರ್ಧರಿಸಿತ್ತು. ಮೀರತ್‌ನ ಕಿತೌಧ್ ಪ್ರದೇಶದಲ್ಲಿ ಅವರ ಬೆಂಗಾವಲು ಪಡೆ ಮೇಲೆ ಗುಂಡು ಹಾರಿಸಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

             ಆರೋಪಿಗಳಲ್ಲಿ ಒಬ್ಬನಾದ ಸಚಿನ್, ನೋಯ್ಡಾ ನಿವಾಸಿಯಾಗಿದ್ದು, ಈತನ ವಿರುದ್ಧ ಈ ಹಿಂದೆ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ತನ್ನ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಸಚಿನ್ ತಾನು ಹಿಂದೂ ಬಲಪಂಥೀಯ ಸಂಘಟನೆಯ ಸದಸ್ಯ ಎಂದು ಹೇಳಿಕೊಂಡಿದ್ದು, ತನ್ನನ್ನು “ದೇಶಭಕ್ತ ಸಚಿನ್ ಹಿಂದೂ” ಎಂದು ಕರೆದುಕೊಂಡಿದ್ದಾನೆ.

            ಅಸಾದುದ್ದೀನ್ ಓವೈಸಿ ಮೇಲಿನ ದಾಳಿಯನ್ನು ಖಂಡಿಸಿ ಎಐಎಂಐಎಂ ಬೆಂಬಲಿಗರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಜನರು ಚಾರ್ಮಿನಾರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries