ಬದಿಯಡ್ಕ: ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಕಾಸರಗೋಡು, ಕೈರಳಿ ಪ್ರಕಾಶನ ಸುಬ್ಬಯ್ಯಕಟ್ಟೆ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬದಿಯಡ್ಕ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಳೆ(ಶನಿವಾರ) ಕಿಳಿಂಗಾರು ಸಾಯಿಮಂದಿರದಲ್ಲಿ ಸಾಯಿರಾಂ ಕಾವ್ಯಾಂಜಲಿ ಕಾರ್ಯಕ್ರಮ-ಕೃತಿ ಬಿಡುಗಡೆ ಹಾಗೂ ನೂತನ ಮನೆ ದುರಸ್ಥಿ ಯೋಜನೆಗೆ ಚಾಲನೆ ಕಾರ್ಯಕ್ರಮಗಳು ನಡೆಯಲಿವೆ.
ಬೆಳಿಗ್ಗೆ 9 ರಿಂದ ನಡೆಯುವ ಸಮಾರಂಭವನ್ನು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಉದ್ಘಾಟಿಸುವರು. ಬದಿಯಡ್ಕ ಗ್ರಾ.ಪಂ. ಉಪಾಧ್ಯಕ್ಷ ಎಂ. ಅಬ್ಬಾಸ್, ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಅಧ್ಯಕ್ಷ ಎನ್ ಚನಿಯಪ್ಪ ನಾಯ್ಕ, ನಿವೃತ್ತ ಪ್ರಾಂಶುಪಾಲ ಪ್ರೊ.ಎ.ಶ್ರೀನಾಥ್, ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ, ಕ.ಸಾ.ಪ. ಉಡುಪಿ ಜಿಲ್ಲಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕ.ಜಾಪ ದಕ್ಷಿಣ ಕನ್ನಡ ಜಿಲ್ಲಾ ಘಟಕಾಧ್ಯಕ್ಷ ಪ್ರವೀಣ್ ಕುಮಾರ್ (ಪಮ್ಮಿ) ಕೋಡಿಯಾಲ್ ಬೈಲು, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಅಶ್ವತ್ಥ ಪೂಜಾರಿ ಲಾಲ್ ಭಾಗ್ ಉಪಸ್ಥಿತರಿರುವರು.
10ಕ್ಕೆ ಸಾಯಿರಾಂ ಕಾವ್ಯಾಂಜಲಿ ನಡೆಯಲಿದೆ. ಕಾಸರಗೋಡು ಕೇಂದ್ರೀಯ ವಿವಿಯ ಪ್ರೊ.ಮೋಹನ್ ಎ.ಕೆ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 12ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಎಸ್.ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು ಆಶೀರ್ವಚನ ನೀಡುವರು. ಕರ್ನಾಟಕ ವಿಧಾನ ಪರಿಷತ್ತು ಉಪಸಭಾಪತಿ ಎಂ.ಕೆ.ಪ್ರಾಣೇಶ್ ಉದ್ಘಾಟಿಸುವರು. ಸಾಯಿರಾಂ ಕೆ.ಎನ್ ಕೃಷ್ಣ ಭಟ್ ಗೌರವ ಉಪಸ್ಥಿತರಿರುವರು. ಈ ಸಂದರ್ಭ ರವಿ ನಾಯ್ಕಾಪು ಬರೆದಿರುವ ಸಾವಿರದ ಸಾಧಕ ಕೃತಿಯನ್ನು ಸಂಸದ ರಾಜಮೋಹನ ಉಣ್ಣಿತ್ತಾನ್ ಬಿಡುಗಡೆಗೊಳಿಸುವರು. ಸಾಹಿತಿ ರಾಧಾಕೃಷ್ಣ ಕೆ ಉಳಿಯತ್ತಡ್ಕ ಕೃತಿಪರಿಚಯ ನೀಡುವರು. ಕೃತಿಕತೃ ರವಿ ನಾಯ್ಕಾಪು ಉಪಸ್ಥಿತರಿರುವರು.
ಈ ಸಂದರ್ಭ ಮನೆದುರಸ್ತಿ ಯೋಜನೆಗೆ ಚಾಲನೆ ನೀಡಲಾಗುವುದು. ಮಂಗಳೂರು ಉತ್ತರ ಶಾಸಕ : ಡಾ. ವೈ. ಭರತ್ ಶೆಟ್ಟಿ ಚಾಲನೆ ನೀಡುವರು. ಜಿ.ಪಂ. ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಕರ್ನಾಟಕ ಇಲೆಕ್ಟ್ರಿಕಲ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಬದಿಯಡ್ಕ ಗ್ರಾ.ಪಂ.ಅ|ಧ್ಯಕ್ಷೆ ಶಾಂತ ಬಿ, ಪುತ್ತಿಗೆ ಗ್ರಾ.ಪಂ. ಅಧ್ಯಕ್ಷ ಸುಬ್ಬಣ್ಣ ಆಳ್ವ, ಮಧೂರು ಗ್ರಾ.ಪಂ. ಅಧ್ಯಕ್ಷ ಗೋಪಾಲಕೃಷ್ಣ ಕೆ, ಬದಿಯಡ್ಕ ಗ್ರಾ.ಪಂ. ಮಾಜಿ ಅಧ್ಯಕ್ಷ ಮಾಹಿನ್ ಕೇಳೋಟ್, ಕ್ಯಾಂಪ್ಕೋ ನಿರ್ದೇಶಕ ಸುರೇಶ್ ಶೆಟ್ಟಿ ಪೂಕಟ್ಟೆ, ಕನ್ನಡ ಭವನ ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ವಾಮನ ರಾವ್ ಬೇಕಲ್, ಗ್ರಾಮಾಭಿವಚೃದ್ದಿ ಯೋಜನೆಯ ಮೇಲ್ವಿಚಾರಕ ದಿನೇಶ ಕೊಕ್ಕಡ, ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ ಉಪಸ್ಥಿತರಿರುವರು.