ಕೊಚ್ಚಿ: ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಭೆಗಳನ್ನು ನಿರ್ಬಂಧಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ತಿರುವನಂತಪುರಂ ಮೂಲದ ಅರುಣ್ ರಾಜ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.
ಮುಂಬರುವ ಸಿಪಿಎಂ ರಾಜ್ಯ ಸಮಾವೇಶಗಳನ್ನು ಗಮನದಲ್ಲಿಟ್ಟುಕೊಂಡು ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದಾರೆ. 50ಕ್ಕಿಂತ ಹೆಚ್ಚು ಜನ ಸೇರಲು ಬಿಡಬಾರದು ಎಂದು ಮನವಿ ಮಾಡಲಾಗಿದೆ.
ಕಾಸರಗೋಡಿನಲ್ಲಿ 50 ರಷ್ಟು ಜನರಿಗೆ ಮಾತ್ರ ಭಾಗವಹಿಸಲು ನೀಡಿದ ಜನವರಿ 21ರ ಹೈಕೋರ್ಟ್ ಆದೇಶವನ್ನು ಸಂಪೂರ್ಣವಾಗಿ ಜಾರಿಗೊಳಿಸುವಂತೆ ಅರ್ಜಿದಾರರು ಕೋರಿದ್ದಾರೆ.