ಜಮ್ಮು:' ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ತಿಂಗಳು ನಡೆಸಲು ಉದ್ದೇಶಿಸಿರುವ ಕೈಗಾರಿಕಾ ಹೂಡಿಕೆಯ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ' ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದರು.
ಜಮ್ಮು:' ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ತಿಂಗಳು ನಡೆಸಲು ಉದ್ದೇಶಿಸಿರುವ ಕೈಗಾರಿಕಾ ಹೂಡಿಕೆಯ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ' ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದರು.
ಇಲ್ಲಿನ ಬಜಾಲ್ಟಾದಲ್ಲಿ ₹ 216 ಕೋಟಿ ವೆಚ್ಚದ 22 ವಿದ್ಯುತ್ ಪ್ರಸರಣ ಮತ್ತು ವಿತರಣಾ ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು, 'ಪ್ರಧಾನಿ ಮೋದಿ ಅವರು ಸುಮಾರು ₹ 20ರಿಂದ 25 ಸಾವಿರ ಕೋಟಿ ಮೊತ್ತದ ಕೈಗಾರಿಕಾ ಹೂಡಿಕೆ ಸಮಾವೇಶದ ಅಧ್ಯಕ್ಷತೆ ವಹಿಸುವಂತೆ ನಾನು ಮನವಿ ಮಾಡಿದ್ದು, ಕಾರ್ಯಕ್ರಮಕ್ಕೆ ಬರಲು ಒಪ್ಪಿಗೆ ಸೂಚಿಸಿದ್ದಾರೆ' ಎಂದರು.
'ಮುಂದಿನ ಒಂದೂವರೆ ವರ್ಷದ ಒಳಗೆ ಜಮ್ಮು ಮತ್ತು ಕಾಶ್ಮೀರವು ವಿದ್ಯುತ್ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಎರಡು ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು' ಎಂದು ಸಿನ್ಹಾ ಹೇಳಿದರು.