ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಜೀರ್ಣೋದ್ಧಾರ ಅಂಗವಾಗಿ ಜೀರ್ಣೋದ್ಧಾರ ಸಮಿತಿ ವತಿಯಿಂದ 48ದಿವಸಗಳ ನಿತ್ಯ ಭಜನೆ'ಮಂಡಲ ಸಂಕೀರ್ತನೋತ್ಸವ'ಮಾ. 6ರಂದು ಆರಂಭಗೊಳ್ಳಲಿದೆ.
ಕಾರ್ಯಕ್ರಮದ ಯಶಸ್ವಿಗಾಗಿ ಸಿದ್ಧತಾ ಸಭೆ ಫೆ, 28ರಂದು ಸಂಜೆ 6.30ಕ್ಕೆ ದೇವಸ್ಥಾನದ ಕಲ್ಯಾಣಮಂಟಪದಲ್ಲಿ ಜರುಗಲಿದೆ. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾರ್ಗದರ್ಶನ ನೀಡುವರು. ಸಮಾರಂಬದಲ್ಲಿ ದೇವಸ್ಥಾನ, ಭಜನಾಮಂದಿರ, ಭಜನಾಸಂಘಗಳ ಪ್ರತಿನಿಧಿಗಳು ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ. ಮಾ. 6ರಿಂದ ನಿರಂತರವಾಗಿ 48ದಿವಸಗಳ ಕಾಲ ಅಖಂಡ ಭಜನಾ ಕಾರ್ಯಕ್ರಮ ನಡೆಯಲಿದೆ.