ನವದೆಹಲಿ: ಕೇಂದ್ರ ಕಾನೂನು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಅನೂಪ್ ಕುಮಾರ್ ಮೆಂಡಿರಟ್ಟಾ ಅವರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ. ನ್ಯಾಯಾಂಗದ ಇತಿಹಾಸದಲ್ಲಿ ಹೀಗೆ ನೇಮಕಾತಿ ನಡೆದಿರುವುದು ಇದೇ ಮೊದಲು ಎನ್ನಲಾಗಿದೆ.

ಸಾಮಾನ್ಯವಾಗಿ ಹೈಕೋರ್ಟ್, ಸುಪ್ರೀಂಕೋರ್ಟ್‌ಗಳಲ್ಲಿ ಹಿರಿಯ ವಕೀಲರಾದವರು ಅಥವಾ ಕೆಳಹಂತದ ಕೋರ್ಟ್‌ಗಳಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವವರನ್ನು ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗುತ್ತದೆ. ಆದರೆ ಇದೇ ಮೊದಲ ಬಾರಿಗೆ ಕಾನೂನು ಕಾರ್ಯದರ್ಶಿಯೊಬ್ಬರನ್ನು ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲಾಗಿದೆ.
ಅನೂಪ್ ಕುಮಾರ್ ಮೆಂಡಿರಟ್ಟಾ ಅವರು ಈ ಹಿಂದೆ ಕೂಡ ಇತಿಹಾಸ ಸೃಷ್ಟಿಸಿದ್ದರು. ಅದೇನೆಂದರೆ ಇವರನ್ನು 2019ರಲ್ಲಿ ದೆಹಲಿ ಕಾನೂನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿತ್ತು. ಆ ಸಮಯದಲ್ಲಿ ಅವರು ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಹುದ್ದೆಯಲ್ಲಿ ಇರುವ ವ್ಯಕ್ತಿಯನ್ನು ಸರ್ಕಾರದ ಕಾನೂನು ಕಾರ್ಯದರ್ಶಿಯನ್ನಾಗಿ ಮಾಡಿದ್ದು ಅದೇ ಮೊದಲಾಗಿತ್ತು.
ಮೆಂಡಿರಟ್ಟಾ ಅವರ ಜೊತೆಗೆ ಇನ್ನು ಮೂವರು ನ್ಯಾಯಾಂಗ ಅಧಿಕಾರಿಗಳಾದ ನೀನಾ ಬನ್ಸಾಲ್ ಕೃಷ್ಣ, ದಿನೇಶ್ ಕುಮಾರ್ ಶರ್ಮಾ ಮತ್ತು ಸುಧೀರ್ ಕುಮಾರ್ ಜೈನ್ ಅವರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲಾಗಿದೆ.