HEALTH TIPS

ಬ್ರಿಟನ್‌ ರಾಣಿ ಎಲಿಜಬೆತ್‌ಗೆ ಕೊರೊನಾ ವೈರಸ್‌ ಸೋಂಕು: ಅರಮನೆ ಮಾಹಿತಿ

             ಲಂಡನ್‌: ರಾಣಿ ಎಲಿಜಬೆತ್ (95) ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿದೆ ಎಂದು ಬಕಿಂಗ್‌ಹ್ಯಾಮ್‌ನ ಅರಮನೆ ತಿಳಿಸಿದೆ.

           ಶೀತವನ್ನೂ ಒಳಗೊಂಡಂತೆ ಅವರಿಗೆ ಕೋವಿಡ್‌ನ ಸೌಮ್ಯ ರೋಗಲಕ್ಷಣಗಳಿವೆ. ಈ ವಾರ ಅವರು ತಮ್ಮ ವಿಂಡ್ಸರ್ ಕ್ಯಾಸಲ್ ನಿವಾಸದಲ್ಲಿ ಅಲ್ಪ ಪ್ರಮಾಣದಲ್ಲಿ ಕರ್ತವ್ಯಗಳನ್ನು ಮುಂದುವರಿಸುವ ನಿರೀಕ್ಷೆಯಿದೆ.

             ವೈದ್ಯಕೀಯ ಆರೈಕೆ ಪಡೆಯುತ್ತಿರುವ ರಾಣಿ, ಕೋವಿಡ್‌ನ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಲಿದ್ದಾರೆ ಎಂದು ಅರಮನೆ ಹೇಳಿದೆ. ‌

          ರಾಣಿ ಎಲಿಜಬೆತ್‌ ಅವರ ಹಿರಿಯ ಮಗ ಪ್ರಿನ್ಸ್ ಚಾರ್ಲ್ಸ್ ಫೆಬ್ರುವರಿ 10 ರಂದು ವಿಂಡ್ಸರ್‌ನಲ್ಲಿ ತಾಯಿಯನ್ನು ಭೇಟಿಯಾಗಿದ್ದರು. ಅದಾದ ಎರಡು ದಿನಗಳಲ್ಲಿ ಚಾರ್ಲ್ಸ್‌ ಅವರಿಗೆ ಕೋವಿಡ್‌ ಇರುವುದು ದೃಢವಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries