ಮಂಗಳೂರು: ರಾಜ್ಯದಲ್ಲಿ ಬುಗಿಲೆದ್ದಿರುವ ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಈಗಾಗಲೇ ಸರಕಾರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಅದರಂತೆ ಮಂಗಳೂರು ವಿವಿಯ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸರಕಾರ ರಜೆ ಘೋಷಣೆ ಮಾಡಿದ್ದು, ಮಂಗಳೂರು ವಿಶ್ವ ವಿದ್ಯಾಲಯದ ಎಲ್ಲಾ ಡಿಗ್ರಿ ಕಾಲೇಜುಗಳು, ಸ್ನಾತಕೋತ್ತರ ವಿಭಾಗ, ಸ್ನಾತಕೋತ್ತರ ಕೇಂದ್ರಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸರಕಾರದ ಆದೇಶದಂತೆ ಫೆಬ್ರವರಿ 9ರಿಂದ ಫೆಬ್ರವರಿ 11ರ ತನಕ ರಜೆ ಘೋಷಿಸಲಾಗಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗದಂತೆ ಆನ್ ಲೈನ್ ಮೂಲಕ ತರಗತಿಗಳನ್ನು ನಡೆಸಲು ಅನುಮತಿಯನ್ನು ನೀಡಲಾಗಿದೆ. ಈ ಬಗ್ಗೆ ಮಂಗಳೂರು ವಿಶ್ವ ವಿದ್ಯಾಲಯದ ಕುಲಸಚಿವರು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.