ತಿರುವನಂತಪುರ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ನಿನ್ನೆ ಭೇಟಿಯಾದರು.
ರಾಜಭವನದಲ್ಲಿ ಮುಖ್ಯಮಂತ್ರಿಗಳು ರಾಜ್ಯಪಾಲರನ್ನು ಭೇಟಿ ಮಾಡಿದರು. ಒಂದು ಗಂಟೆಗಳಷ್ಟು ಹೊತ್ತು ಮಾತುಕತೆ ನಡೆಯಿತು. ಸರ್ಕಾರ ತಿದ್ದುಪಡಿ ಮಾಡಲಿರುವ ಲೋಕಾಯುಕ್ತ ಸುಗ್ರೀವಾಜ್ಞೆ ಸಂವಿಧಾನ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ಈ ಸಂದರ್ಭ ಮನವರಿಕೆ ಮಾಡಿರುವರೆಂದು ತಿಳಿದುಬಂದಿದೆ.
ಲೋಕಾಯುಕ್ತ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದ ಕಾರಣ ಮುಖ್ಯಮಂತ್ರಿಗಳು ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು. ಭಾನುವಾರ ಮಧ್ಯಾಹ್ನ 12.40ಕ್ಕೆ ಮುಖ್ಯಮಂತ್ರಿಗಳು ದುಬೈನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಂಜೆ ತಿರುವನಂತಪುರಕ್ಕೆ ಬಂದರು.
ಲೋಕಾಯುಕ್ತ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ಕಳುಹಿಸಿದೆ. ಇದುವರೆಗೂ ರಾಜ್ಯಪಾಲರು ಈ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಮುಖ್ಯಮಂತ್ರಿ ವಿದೇಶ ಪ್ರವಾಸದಲ್ಲಿದ್ದು ವಾಪಸಾದ ಬಳಿಕ ನಿರ್ಧಾರಕ್ಕಾಗಿ ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ.