HEALTH TIPS

ಹಾಡು ನಿಲ್ಲಿಸಿದ ಗಾನ ಕೋಗಿಲೆ:ಲತಾ ಮಂಗೇಶ್ಕರ್ ಇನ್ನಿಲ್ಲ

      ಮುಂಬೈ: ಗಾನಕೋಗಿಲೆ ಲತಾ ಮಂಗೇಶ್ಕರ್(Lata Mangeshkar) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಕೋವಿಡ್ ಪಾಸಿಟಿವ್ ಬಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ(Breach candly hospital) ದಾಖಲಾಗಿದ್ದ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. 

      92 ವರ್ಷದ ಲತಾ ಮಂಗೇಶ್ಕರ್ ಕೋವಿಡ್ ಸೋಂಕಿನ ಸೌಮ್ಯ ಲಕ್ಷಣ ಕಂಡುಬಂದು ಕಳೆದ ಜನವರಿ 8ರಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿದ್ದರು.  ಕೆಲ ದಿನಗಳ ನಂತರ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿದ್ದರಿಂದ ವೆಂಟಿಲೇಟರ್ ನೆರವನ್ನು ತೆಗೆಯಲಾಗಿತ್ತು. ಆದರೆ ಇಂದು ಮತ್ತೆ ಹದಗೆಟ್ಟು ವೆಂಟಿಲೇಟರ್ ನೆರವು ಒದಗಿಸಲಾಗಿತ್ತು. 

        ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಮಂಗೇಶ್ಕರ್ ಅವರು 1942ರಲ್ಲಿ 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಹಲವಾರು ಭಾರತೀಯ ಭಾಷೆಗಳಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಭಾರತದ ನೈಟಿಂಗೇಲ್(ಗಾನ ಕೋಗಿಲೆ) ಎಂದು ಕರೆಯಲ್ಪಡುವ ಲತಾ ಮಂಗೇಶ್ಕರ್ ಅವರು ಪದ್ಮಭೂಷಣ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಬಹು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡೆದಿದ್ದಾರೆ. 

       ಅವರು ಹಾಡಿದ 'ಲಗ್ ಜಾ ಗಲೇ', 'ಯೇ ಗಲಿಯಾನ್ ಯೇ ಚೌಬಾರಾ', 'ಪ್ಯಾರ್ ಕಿಯಾ ತೊ ಡರ್ನಾ ಕ್ಯಾ', 'ಬಹೋನ್ ಮೇ ಚಲೇ ಆವೋ', 'ವೀರ್ ಜರಾ'ದ 'ತೇರೆ ಲಿಯೇ' ಮತ್ತು ಇನ್ನೂ ಅನೇಕ ಹಾಡುಗಳು ಜನಪ್ರಿಯವಾಗಿವೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries