ಮುಂಬಯಿ: ಖ್ಯಾತ ಬೆಂಗಾಳಿ ಗಾಯಕಿ ಸಂಧ್ಯಾ ಮುಖರ್ಜಿ ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.
ಕಳೆದ ಹಲವು ದಿನಗಳಿಂದ ಸಂಧ್ಯಾ ಅವರಿಗೆ ಅನಾರೋಗ್ಯ ಕಾಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಏಕಾಏಕಿ ಹೃದಯಾಘಾತ ಸಂಭವಿಸಿದೆ.
ಇತ್ತೀಚೆಗೆ ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ ಕಾರಣಕ್ಕೆ ಅವರು ಸುದ್ದಿಯಾಗಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು.