ಮಂಜೇಶ್ವರ : ಕಳೆದ 2 ವರ್ಷಗಳಿಂದ ಸ್ಥಗಿತವಾಗಿದ್ದ ಪ್ರೀ ಪ್ರೈಮರಿ ವಿಭಾಗದ ತರಗತಿಗಳು ಇದೀಗ ಸರ್ಕಾರದ ಆದೇಶದ ಮೇರೆಗೆ ಆರಂಭಿಸಲು ಅನುಮತಿ ದೊರೆತಿದ್ದು, ಕುಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರೀ ಪ್ರೈಮರಿ ವಿಭಾಗದ ತರಗತಿಗೆ ಸೋಮವಾರ ಚಾಲನೆ ನೀಡಲಾಯಿತು.
ಶಾಲೆಯ ಪ್ರೀ ಪ್ರೈಮರಿ ವಿಭಾಗದ ನೇತೃತ್ವ ವಹಿಸುತ್ತಿರುವ ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಸಹಕರಿಸುತ್ತಿರುವ ರಕ್ಷಕ ಶಿಕ್ಷಕ ಸಂಘದ ಸಹಯೋಗದಲ್ಲಿ ಆಫ್ಲೈನ್ ತರಗತಿಗಳಿಗೆ ಚಾಲನೆ ನೀಡಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ ಪ್ರೀ ಪ್ರೈಮರಿ ವಿಭಾಗದ ಪುಟಾಣಿ ಮಕ್ಕಳಿಗೆ ಬಲೂನ್ ಹಾಗೂ ಮಾಸ್ಕ್ ಗಳನ್ನು ನೀಡಿ ಸ್ವಾಗತಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ, ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ, ರಕ್ಷಕ ಸಂಘದ ಉಪಾಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು, ಮಾತೃ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ಪ್ರೇಮ ಜಿ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಶಿಕುಮಾರ್ ಕುಳೂರು ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು.