ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ.
ಭದ್ರತಾ ಪಡೆಗಳು ಆತನನ್ನು ತಡೆದು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿವೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಆತ ಮಾನಸಿಕವಾಗಿ ಅಸ್ವಸ್ಥ ಎಂದು ತಿಳಿದು ಬಂದಿದೆ. ಇದರ ಜೊತೆಗೆ ಬಾಡಿಗೆ ಕಾರು ಓಡಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಪ್ ಅಳವಡಿಸಿದ್ದಾರೆ ಎಂದು ಹೇಳಿದ್ದ ಆಗಂತುಕ:
ಭದ್ರತಾ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಾಗ ಆತ, 'ತನ್ನೊಳಗೆ ಯಾರೋ ಚಿಪ್ ಅಳವಡಿಸಿದ್ದಾರೆ ಮತ್ತು ತನ್ನನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತನಿಖೆಯ ಸಮಯದಲ್ಲಿ ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದ. ಆದರೆ ಪೊಲೀಸರು ಈ ಹೇಳಿಕೆಯನ್ನು ಸುಳ್ಳು ಎಂದು ಪತ್ತೆ ಮಾಡಿದ್ದಾರೆ.