ಕಾಸರಗೋಡು: ಕುಂಬಳೆ ಗ್ರಾಮ ಪಂಚಾಯಿತಿಯ ಒಂಬತ್ತು ಮಂದಿ ಸದಸ್ಯರು ಎರಡು ಸ್ಥಾಯೀ ಸಮಿತಿ ಅಧ್ಯಕ್ಷ ಸ್ಥಾನಗಳಿಗೆ ಮತ್ತು ಸ್ಥಾಯೀ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಕುಂಟಾರು ರವೀಶ ತಂತ್ರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬಿಜೆಪಿ ಕಾಸರಗೋಡು ಜಿಲ್ಲಾ ಕೋರ್ ಕಮಿಟಿ ಹಾಗೂ ಪಕ್ಷದ ರಾಜ್ಯ ಸಮಿತಿ ತೀರ್ಮಾನ ಪ್ರಕಾರ ಈ ರಾಜೀನಾಮೆ ಸಲ್ಲಿಕೆಯಾಗಲಿರುವುದಾಗಿ ತಿಳಿಸಿದರು.
ಬಿಜೆಪಿ ರಾಜ್ಯ ಸಮಿತಿ ಕಾರ್ಯದರ್ಶಿ ಕೆ. ಶ್ರೀಕಾಂತ್, ವಲಯ ಕಾರ್ಐದರ್ಶಿ ಪಿ.ಸುರೇಶ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎ.ವೇಲಾಯುಧನ್, ವಿಜಯ ಕುಮಾರ್ ರೈ, ಬಿಜೆಪಿ ಕುಂಬಳೆ ಮಂಡಲ ಸಮಿತಿ ಅಧ್ಯಕ್ಷ ಸುನಿಲ್ ಕುಮಾರ್ ಟಿ.ಸಿ, ಕುಂಬಳೆ ಏರಿಯಾ ಸಮಿತಿ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಆರಿಕ್ಕಾಡಿ, ಸುಜಿತ್ ರೈ, ಕುಂಬಳೆ ಗ್ರಾಮ ಪಂಚಾಯಿತಿಯ ಬಿಜೆಪಿ ಜನಪ್ರತಿನಿಧಿಗಳು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.