ಬೆಂಗಳೂರು: ಕೇರಳ ಮತ್ತು ಗೋವಾದಿಂದ ಬರುವ ಪ್ರಯಾಣಿಕರಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಅಗತ್ಯವಿಲ್ಲ. ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಗುರುವಾರ ಈ ನಿಯಮವನ್ನು ಸಡಿಲಿಸಿ ಶಿಫಾರಸು ಮಾಡಿದೆ.
ಆದಾಗ್ಯೂ, ಎರಡು ಡೋಸ್ ಲಸಿಕೆ ಪ್ರಮಾಣ ಪತ್ರ ಹೊಂದುವುದನ್ನು ಕಡ್ಡಾಯವಾಗಿದೆ. ಇತ್ತೀಚಿಗೆ ಮಹಾರಾಷ್ಟ್ರದಿಂದ ಬರುವವರಿಗೆ ನಿಯಮಗಳನ್ನು ಕರ್ನಾಟಕ ಸಡಿಲಿಸಿತ್ತು.
ಈ ಸಂಬಂಧ ಗುರುವಾರ ಸುತ್ತೋಲೆಯೊಂದನ್ನು ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿಕೆ ಅನಿಲ್ ಕುಮಾರ್, ಪ್ರಸ್ತುತ ಕೋವಿಡ್-19 ಪರಿಸ್ಥಿತಿ ಸುಧಾರಿಸಿರುವುದರಿಂದ ಹಿನ್ನೆಲೆಯಲ್ಲಿ ನಿಯಮಗಳನ್ನು ಸಡಿಲಿಸಲಾಗಿದೆ ಎಂದು ಹೇಳಿದ್ದಾರೆ.
ಕೇರಳ ಮತ್ತು ಗೋವಾದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಗಮನಾರ್ಹ ಇಳಿಕೆಯೊಂದಿಗೆ ಈ ಎರಡು ರಾಜ್ಯಗಳಿಂದ ಬರುವ ಜನರಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ತೋರಿಸುವುದನ್ನು ನಿಲ್ಲಿಸಬೇಕೆಂದು ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಕೂಡಾ ತಮ್ಮ ಟ್ವಿಟರ್ ಖಾತೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
Passengers coming to Karnataka from Kerala and Goa, through all modes of transportation, no longer need a negative RTPCR report. This waiver was given to passengers from Maharashtra last week. Vaccine certificate is however mandatory. #COVID19 #Karnataka #Kerala #Goa pic.twitter.com/lnI16CohL6
— Dr Sudhakar K (@mla_sudhakar) February 17, 2022