ಸಮರಸ ಚಿತ್ರಸುದ್ದಿ: ಬದಿಯಡ್ಕ: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಶಾಲಾ ಮಕ್ಕಳಲ್ಲಿ ಸೃಜನಶೀಲತೆ ಮತ್ತು ನವೀನ ಚಿಂತನೆಯ ಸಂಸ್ಕೃತಿ ಬೆಳಸಲು ನಡೆಸುವ ಇನ್ಸ್ಪಯರ್ ಅವಾರ್ಡ್ ಸ್ಪರ್ಧೆಯಲ್ಲಿ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ 10ನೇ ತರಗತಿಯ ವಿದ್ಯಾರ್ಥಿನಿ ಸಹನಾ ಕೆ. ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಿ ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಪಡೆದಿರುತ್ತಾಳೆ. ರೂ.25000 ದೊಂದಿಗೆ ಪ್ರಶಸ್ತಿಪತ್ರವೂ ಲಭಿಸಲಿದೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ರಕ್ಷಕ ಶಿಕ್ಷಕ ಸಂಘ, ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದ ಅಭಿನಂದನೆಯನ್ನು ಸಲ್ಲಿಸಿದೆ. ಈಕೆ ಕೋಳಾರಿ ವಿಷ್ಣು ಪ್ರಸಾದ ಹಾಗೂ ಸೌಮ್ಯ ದಂಪತಿಗಳ ಪುತ್ರಿ.