ಬದಿಯಡ್ಕ: ನೀರ್ಚಾಲು ಸಮೀಪದ ಕುಕ್ಕಂಕೂಡ್ಲು ಶ್ರೀಕಂಠಪ್ಪಾಡಿ ಶ್ರೀಸುಬ್ರಹ್ಮಣ್ಯ ದೇವಾಲಯದಲ್ಲಿ ಮಾ.14 ಹಾಗೂ 15 ರಂದು ಬ್ರಹ್ಮಕಲಶೋತ್ತರ ದೃಢಕಲಶ ಸಮಾರಂಭ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ಭಾನುವಾರ ಸಂಜೆ ಶ್ರೀಕ್ಷೇತ್ರ ಪರಿಸರದÀಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ನ್ಯಾಯವಾದಿ. ಕೆ.ಜಿ.ಗೌರೀಶಂಕರ ರೈ ಕೋಡಿಂಗಾರುಗುತ್ತು ಅಧ್ಯಕ್ಷತೆ ವಹಿಸಿದ್ದರು. ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಗಳ ಕಾರ್ಯಾಧ್ಯಕ್ಷ ಶ್ಯಾಮ್ ಭಟ್ ಏವಿಂಜೆ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಮಹೇಶ್ ಭಟ್ ಪಡಿಯಡ್ಪು, ಕೋಶಾಧಿಕಾರಿ ಪೆರ್ವ ಕೃಷ್ಣ ಭಟ್, ಮುಖ್ಯ ಅರ್ಚಕ ರಾಮಕೃಷ್ಣ ಮಯ್ಯ, ಮಹಿಳಾ ಘಟಕದ ಗೌರವಾಧ್ಯಕ್ಷೆ ಮೈನಾ ಜಿ.ರೈ, ಸುರೇಶ್ ಏವಿಂಜೆ ಮೊದಲಾದವರು ಉಪಸ್ಥಿತರಿದ್ದು ಮಾತನಾಡಿದರು. ಅಧ್ಯಕ್ಷ ಸುಂದರ ಶೆಟ್ಟಿ ಕೊಲ್ಲಂಗಾನ ಕಾರ್ಯಕ್ರಮ ನಿರೂಪಿಸಿ, ಮಾಹಿತಿಗಳನ್ನು ನೀಡಿದರು.