ಮುಂಬೈ: ಬಹು ಅಂಗಾಂಗ ವೈಫಲ್ಯದಿಂದ ಇಂದು ಬೆಳಗ್ಗೆ ನಿಧನರಾದ ಭಾರತ ರತ್ನ ಪುರಸ್ಕೃತೆ, ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಪಂಚಭೂತಗಳಲ್ಲಿ ಲೀನರಾದರು. ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಿತು.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಉದ್ದವ್ ಠಾಕ್ರೆ, ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೊಲ್ಕರ್, ಬಾಲಿವುಡ್ ನಟ ಶರೂಖ್ ಖಾನ್ ದಂಪತಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಅಗಲಿದ ಹಿರಿಯ ಗಾಯಕಿಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡರು.
92 ವರ್ಷದ ಲತಾ ಮಂಗೇಶ್ಕರ್ ಗೆ ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅಸುನೀಗಿದರು.