ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಅವರು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿದರು.
ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಮನ್ಸುಖ್ ಮಾಂಡವಿಯಾ ಅವರು ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಪೋಲಿಯೊದಿಂದ ರಕ್ಷಿಸಲು, 'ಪೋಲಿಯೊ ರಾಷ್ಟ್ರೀಯ ರೋಗನಿರೋಧಕ ದಿನ - 2022' ಅನ್ನು ಇಂದು ಪ್ರಾರಂಭಿಸಲಾಯಿತು. ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಾದರೆ ಮಕ್ಕಳು ಆರೋಗ್ಯವಂತರಾಗಿರುವುದು ಅವಶ್ಯ. ಜನರು ಮುಂದೆ ಬಂದು ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದರು.