ಮುಳ್ಳೇರಿಯ: ಕಾರಡ್ಕ ಬ್ಲಾಕ್ ಪಂಚಾಯತಿ ವತಿಯಿಂದ ಸ್ಥಳೀಯಾಡಳಿತ ದಿನಾಚರಣೆಯನ್ನು ಬ್ಲಾಕ್ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬ್ಲಾಕ್ ಪಂಚಾಯತಿ ಅಧ್ಯಕ್ಷ ಸಿ.ಜಿ.ಮ್ಯಾಥ್ಯೂ ಉದ್ಘಾಟಿಸಿದರು. ಉಪಾಧ್ಯಕ್ಷೆ ಕೆ.ರಮಣಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶೀಬಾ ಕೆ ಸ್ವಾಗತಿಸಿ, ಎನ್ ಎ ಮಜೀದ್ ವಂದಿಸಿದರು. ಈ ಸಂದರ್ಭದಲ್ಲಿ ಮುಳಿಯಾರು ಪಂಚಾಯಿತಿ ಅಧ್ಯಕ್ಷೆ ಪಿ.ವಿ.ಮಿನಿ, ಕುತ್ತಿಕೋಲ್ ಗ್ರಾಮ ಪಂಚಾಯತಿ ಅಧ್ಯಕ್ಷ ಎಚ್.ಮುರಳಿ, ಬೆಳ್ಳೂರು ಗ್ರಾ.ಪಂ.ಅಧ್ಯಕ್ಷ ಎಂ.ಶ್ರೀಧರ, ಬೇಡಗ ಪಂಚಾಯಿತಿ ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ವರದರಾಜ್, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಎಂ.ವಸಂತಿ, ಕಿಲಾ ಅಧ್ಯಾಪಕ ಗಂಗಾಧರನ್, ರಾಜಾರಾಮ್ ಉಪಸ್ಥಿತರಿದ್ದರು. ತಿರುವನಂತಪುರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉದ್ಘಾಟಿಸಿದ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಬ್ಲಾಕ್ ಪಂಚಾಯತ್ ಸಭಾಂಗಣದಲ್ಲಿ ನೇರ ಪ್ರಸಾರ ಮಾಡಲಾಯಿತು.