HEALTH TIPS

ಗೇಟ್(GATE) ಪರೀಕ್ಷೆ ಮುಂದೂಡಲು ಸುಪ್ರೀಂ ಕೋರ್ಟ್ ನಕಾರ: ನಿಗದಿಯಂತೆ ಫೆ.5ರಂದು ಪರೀಕ್ಷೆ

           ನವದೆಹಲಿ: ಎಂಜಿನಿಯರಿಂಗ್ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ (GATE) ಪರೀಕ್ಷೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೋವಿಡ್ ನಿರ್ಬಂಧನೆ ನಡುವೆ ಫೆಬ್ರವರಿ 5ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಅದನ್ನೀಗ ಮುಂದೂಡದೆ ಅದೇ ದಿನ ನಡೆಸಲು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

          ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್, ಸೂರ್ಯ ಕಾಂತ್ ಮತ್ತು ವಿಕ್ರಮ್ ನಾಥ್ ಅವರನ್ನೊಳಗೊಂಡ ನ್ಯಾಯಪೀಠ, ಗೇಟ್ ಪರೀಕ್ಷೆ ನಿಗದಿಯಾಗಿರುವ ಕೇವಲ 48 ಗಂಟೆ ಮೊದಲು ಮುಂದೂಡುವುದು ವಿದ್ಯಾರ್ಥಿಗಳಲ್ಲಿ ಗೊಂದಲವನ್ನುಂಟುಮಾಡುತ್ತದೆ. ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಔದ್ಯೋಗಿಕ ಭವಿಷ್ಯದ ಮೇಲೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ಹೇಳಿದೆ.

            ಯಾವಾಗ ಪರೀಕ್ಷೆ ನಡೆಸಬೇಕೆಂಬುದು ಶೈಕ್ಷಣಿಕ ನೀತಿಯಾಗಿದ್ದು ಅದರಂತೆ ಪರೀಕ್ಷೆ ನಡೆಸಬೇಕು, ಈ ವಿಷಯದಲ್ಲಿ ನ್ಯಾಯಾಲಯ ಮಧ್ಯೆ ಪ್ರವೇಶಿಸುವುದಿಲ್ಲ ಎಂದು ಕೂಡ ನ್ಯಾಯಪೀಠ ಹೇಳಿದೆ. 

              ಈ ಬಾರಿಯ ಗೇಟ್ ಪರೀಕ್ಷೆಯಲ್ಲಿ 9 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದು, ಸುಮಾರು 20 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡುವಂತೆ ಆನ್ ಲೈನ್ ನಲ್ಲಿ ಸಹಿ ಹಾಕಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 

             ದೇಶದ ಸುಮಾರು 200 ಕೇಂದ್ರಗಳಲ್ಲಿ 9 ಲಕ್ಷ ವಿದ್ಯಾರ್ಥಿಗಳು ಭೌತಿಕವಾಗಿ ಪರೀಕ್ಷೆಗೆ ಹಾಜರಾಗಬೇಕಿದ್ದು ಸಂಬಂಧಪಟ್ಟ ಆಡಳಿತ ಅಧಿಕಾರಿ ವರ್ಗ ಸೂಕ್ತ ಕೋವಿಡ್ ನಿಬಂಧನೆಗಳು, ಮಾರ್ಗಸೂಚಿಗಳನ್ನು ಹೊರಡಿಸಿಲ್ಲ, ಈ ಸನ್ನಿವೇಶದೊಳಗೆ ಪರೀಕ್ಷೆ ಬರೆಯುವುದು ಕಷ್ಟವಾಗುತ್ತದೆ ಎಂದು ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಕೋರಿದ್ದರು. 

              ಗೇಟ್ ಪರೀಕ್ಷೆ: ಎಂಜಿನಿಯರಿಂಗ್ ಪದವಿ ತರಗತಿಗಳಲ್ಲಿನ ವಿಷಯಗಳು ಮತ್ತು ವಿಜ್ಞಾನಕ್ಕೆ ಸಂಬಂಧಪಟ್ಟ ವಿಷಯಗಳನ್ನು ಅಧ್ಯಯನ ಮಾಡಿ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಸ್ನಾತಕೋತ್ತರ ಪದವಿ ತರಗತಿಗಳ ಪ್ರವೇಶಕ್ಕೆ ಮತ್ತು ಕೆಲವು ಸಾರ್ವಜನಿಕ ವಲಯ ಘಟಕಗಳಲ್ಲಿ ನೇಮಕಾತಿಗೆ ಗೇಟ್ ಪರೀಕ್ಷೆ ನಡೆಸಲಾಗುತ್ತದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries