ನವದೆಹಲಿ: 19 ಕೆಜಿ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಇಂದು ಮಾರ್ಚ್ 1ರಿಂದ 105 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ದೆಹಲಿಯಲ್ಲಿ ಇನ್ನು ಮುಂದೆ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 2,012 ರೂಪಾಯಿ ಆಗಿದೆ.
5 ಕೆಜಿ ಸಿಲಿಂಡರ್ ಬೆಲೆಯೂ 27 ರೂ. ಏರಿಕೆಯಾಗಿದೆ. ಈಗ 5 ಕೆಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 569 ರೂಪಾಯಿ ಆಗಿದೆ. ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ನಲ್ಲಿ ಯಾವುದೇ ಹೆಚ್ಚಳವಿಲ್ಲ. ಎಲ್ಪಿಜಿ ಸಿಲಿಂಡರ್ ದರವನ್ನು ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರತಿ ತಿಂಗಳು ಪರಿಷ್ಕರಿಸಲಾಗುತ್ತದೆ.
ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಕಳೆದ ಫೆಬ್ರವರಿ 1ರಂದು 19 ಕೆಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗಳಷ್ಟು ಕಡಿತಗೊಳಿಸಿದ್ದವು.