ನವದೆಹಲಿ: ಹತ್ತು ಅಥವಾ ಅದಕ್ಕಿಂತ ಹೆಚ್ಚು ನೌಕರರನ್ನು ಹೊಂದಿದ ಸಾರ್ವಜನಿಕ ಅಥವಾ ಖಾಸಗಿ ವಲಯದ ಯಾವುದೇ ಕಂಪನಿ ಅಥವಾ ಸಂಸ್ಥೆ ಲೈಂಗಿಕ ಕಿರುಕುಳದ ದೂರುಗಳನ್ನು ಸ್ವೀಕರಿಸಲು ಆಂತರಿಕ ಸಮಿತಿಯೊಂದನ್ನು ರಚಿಸಬೇಕು ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.

ಸೋಮವಾರದ ಲೋಕಸಭೆ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಕೇಂದ್ರ ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರು, ಕೆಲಸದ ಅವಧಿ ವೇಳೆ ಮಹಿಳೆಯರಿಗೆ ಸುರಕ್ಷಿತ ಮತ್ತು ಭದ್ರತೆಯ ವಾತಾವರಣ ಕಲ್ಪಿಸುವ ಉದ್ದೇಶದೊಂದಿಗೆ 2013ರ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಈ ಪ್ರಕಾರ ಸಾರ್ವಜನಿಕ ಅಥವಾ ಖಾಸಗಿ ವಲಯದಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ನೌಕರರನ್ನು ಹೊಂದಿದ ಕಂಪನಿ ಅಥವಾ ಸಂಸ್ಥೆಯು ಲೈಂಗಿಕ ಕಿರುಕುಳದ ದೂರುಗಳ ಸ್ವೀಕಾರ ಮತ್ತು ತನಿಖೆಗೆ ಆಂತರಿಕ ಸಮಿತಿಯೊಂದನ್ನು ರಚಿಸಬೇಕು ಎಂದು ಹೇಳಿದರು.
ಅಲ್ಲದೆ 10ಕ್ಕಿಂತ ಕಡಿಮೆ ನೌಕರರು ಅಥವಾ ಉದ್ಯೋಗದಾತನ ವಿರುದ್ಧವೇ ಕೇಳಿಬರುವ ದೂರುಗಳ ಸ್ವೀಕಾರಕ್ಕೆ ಪ್ರತಿ ಜಿಲ್ಲೆಯಲ್ಲಿ ಸ್ಥಳೀಯ ಸಮಿತಿ ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಇದೇ ವೇಳೆ ತಿಳಿಸಿದರು.