ತಿರುವನಂತಪುರ: ರಾಜ್ಯದಲ್ಲಿ ಇಂದು 1223 ಮಂದಿಗೆ ಕೋವಿಡ್ ಪತ್ತೆಯಾಗಿದೆ. ಎರ್ನಾಕುಳಂ 227, ತಿರುವನಂತಪುರ 148, ಕೊಟ್ಟಾಯಂ 128, ತ್ರಿಶೂರ್ 114, ಕೊಲ್ಲಂ 110, ಕೋಝಿಕ್ಕೋಡ್ 99, ಇಡುಕ್ಕಿ 82, ಪತ್ತನಂತಿಟ್ಟ 71, ಕಣ್ಣೂರು 57, ಪಾಲಕ್ಕಾಡ್ 53, ಮಲಪ್ಪುರಂ 44, ಆಲಪ್ಪುಳ 39, ವಯನಾಡ್ 28, ಕಾಸರಗೋಡು 23 ಎಂಬಂತೆ ಸೋಂಕು ದೃಢಪಟಪ್ಟಿದೆ.
ಕಳೆದ 24 ಗಂಟೆಗಳಲ್ಲಿ 23,641 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 72,799 ಮಂದಿ ಜನರು ಕಣ್ಗಾವಲಿನಲ್ಲಿದ್ದಾರೆ. ಇವರಲ್ಲಿ 71,566 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 1233 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಒಟ್ಟು 181 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಸ್ತುತ 12,868 ಕೊರೋನಾ ಪ್ರಕರಣಗಳಲ್ಲಿ, ಕೇವಲ 10 ಪ್ರತಿಶತದಷ್ಟು ಜನರು ಆಸ್ಪತ್ರೆಗಳು / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ ನಾಲ್ವರು ಮೃತರಾಗಿದ್ದಾರೆ . ಇದಲ್ಲದೆ, ಹಿಂದಿನ ದಿನಗಳಲ್ಲಿ ದಾಖಲೆಗಳನ್ನು ತಡವಾಗಿ ಸ್ವೀಕರಿಸಿದ ಕಾರಣ 20 ಸಾವುಗಳು ಮತ್ತು ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ್ದರಿಂದ 59 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 66,263ಕ್ಕೆ ಏರಿಕೆಯಾಗಿದೆ.
ಇಂದು ದೃಢಪಟ್ಟಿರುವ 3 ಪ್ರಕರಣಗಳು ಹೊರ ರಾಜ್ಯದಿಂದ ಬಂದವರು. ಸಂಪರ್ಕದಿಂದ 1107 ಮಂದಿ ಜನರು ಸೋಂಕಿಗೆ ಒಳಗಾಗಿದ್ದಾರೆ. 101 ಮಂದಿಯ ಸಂಪರ್ಕ ಮೂಲವು ಸ್ಪಷ್ಟವಾಗಿಲ್ಲ. ಇಂದು ಹನ್ನೆರಡು ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢಪಡಿಸಲಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 2424 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 328, ಕೊಲ್ಲಂ 339, ಪತ್ತನಂತಿಟ್ಟ 144, ಆಲಪ್ಪುಳ 132, ಕೊಟ್ಟಾಯಂ 229, ಇಡುಕ್ಕಿ 161, ಎರ್ನಾಕುಳಂ 302, ತ್ರಿಶೂರ್ 286, ಪಾಲಕ್ಕಾಡ್ 24, ಮಲಪ್ಪುರಂ 83, ಕೋಝಿಕ್ಕೋಡ್ 183, ವಯನಾಡ್ 98, ಕಣ್ಣೂರು 85, ಕಾಸರಗೋಡು 30 ಎಂಬಂತೆ ಗುಣಮುಖರಾಗಿದ್ದಾರೆ.