ತಿರುವನಂತಪುರ: ರಾಜ್ಯದಲ್ಲಿ ಇಂದು 1791 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಎರ್ನಾಕುಳಂ 318, ತಿರುವನಂತಪುರ 205, ಕೊಟ್ಟಾಯಂ 190, ತ್ರಿಶೂರ್ 150, ಇಡುಕ್ಕಿ 145, ಕೊಲ್ಲಂ 139, ಪತ್ತನಂತಿಟ್ಟ 136, ಕೋಝಿಕ್ಕೋಡ್ 127, ವಯನಾಡ್ 79, ಆಲಪ್ಪುಳ, 72, ಪಾಲಕ್ಕಾಡ್ 70, ಮಲಪ್ಪುರಂ 67, ಕಣ್ಣೂರು 58, ಕಾಸರಗೋಡು 35 ಎಂಬಂತೆ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 32,135 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 64,077 ಮಂದಿ ಜನರು ಕಣ್ಗಾವಲಿನಲ್ಲಿದ್ದಾರೆ. ಇವರಲ್ಲಿ 62,912 ಮಂದಿ ಮನೆ/ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 1165 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. 178 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ, 12,677 ಕೋವಿಡ್ ಪ್ರಕರಣಗಳಲ್ಲಿ, ಕೇವಲ 9 ಶೇಕಡಾ ಜನರು ಮಾತ್ರ ಆಸ್ಪತ್ರೆಗಳು / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ನಾಲ್ವರು ಕೋವಿಡ್ ಬಾಧಿಸಿ ಮೃತರಾಗಿದ್ದಾರೆ. ಅಲ್ಲದೆ, ಹಿಂದಿನ ದಿನಗಳಲ್ಲಿ ದಾಖಲೆಗಳ ವಿಳಂಬದಿಂದ 7 ಸಾವುಗಳು ಮತ್ತು ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ್ದರಿಂದ 100 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 66,374ಕ್ಕೆ ಏರಿಕೆಯಾಗಿದೆ. ಇಂದು ಸೋಂಕು ಪತ್ತೆಯಾದವರಲ್ಲಿ 8 ಮಂದಿ ಹೊರ ರಾಜ್ಯದವರು. 1692 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 74 ಮಂದಿ ಜನರ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು ಹದಿನೇಳು ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಬಾಧಿಸಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 1871 ಜನರು ಗುಣಮುಖರಾಗಿದ್ದಾರೆ. ತಿರುವನಂತಪುರಂ 211, ಕೊಲ್ಲಂ 220, ಪತ್ತನಂತಿಟ್ಟ 120, ಆಲಪ್ಪುಳ 126, ಕೊಟ್ಟಾಯಂ 100, ಇಡುಕ್ಕಿ 111, ಎರ್ನಾಕುಳಂ 377, ತ್ರಿಶೂರ್ 102, ಪಾಲಕ್ಕಾಡ್ 30, ಮಲಪ್ಪುರಂ 76, ಕೋಝಿಕ್ಕೋಡ್ 197, ವಯನಾಡ್ 56, ಕಣ್ಣೂರು 113, ಕಾಸರಗೋಡು 32 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 12,677 ಮಂದಿಗೆ ಸೋಂಕು ದೃಢಪಟ್ಟಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 64,35,236 ಮಂದಿ ಕೊರೊನಾದಿಂದ ಮುಕ್ತರಾಗಿದ್ದಾರೆ.