ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ 3ನೇ ಅಲೆ ಪ್ರಭಾವ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,993 ಹೊಸ ಪ್ರಕರಣಗಳು ವರದಿಯಾಗಿದ್ದು, 108 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 49,948ಕ್ಕೆ ಇಳಿಕೆಯಾಗಿದೆ.
ದೇಶದಲ್ಲಿ ಸಕ್ರಿಯ ಕೊರೋನಾ ಸೋಂಕಿತರ ಸಂಖ್ಯೆ ಶೇಕಡಾ 0.12ರಷ್ಟಿದ್ದು, ಶೇಕಡಾ 98.68ರಷ್ಟು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ಇಲ್ಲಿಯವರೆಗೆ 1,79,13,41,295 ಡೋಸ್ ಲಸಿಕೆಯನ್ನು ನೀಡಲಾಗಿದೆ.