ನವದೆಹಲಿ: ಯುದ್ಧಗ್ರಸ್ಥ ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದ 20,000 ಭಾರತೀಯರನ್ನು ಸ್ವದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. 3,000 ಭಾರತೀಯರು ಇನ್ನೂ ಅಲ್ಲೇ ಸಿಲುಕಿಕೊಂಡಿದ್ದಾರೆ. ಈ ಮಾಹಿತಿಯನ್ನು ಭಾರತೀಯ ವಿದೇಶಾಂಗ ಸಚಿವಾಲಯ ಬಹಿರಂಗಪಡಿಸಿದೆ.
ಉಕ್ರೇನ್ ನಲ್ಲಿ ಮುಖ್ಯವಾಗಿ ಎರಡು ನಗರಗಳಲ್ಲಿ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆ ಎರಡು ನಗರಗಳು ಯುದ್ಧ ತೀವ್ರವಾಗಿ ನಡೆಯುತ್ತಿರುವ ಸ್ಥಳದ ಹತ್ತಿರ ಇರುವುದರಿಂದ ಸ್ಥಳಾಂತರ ಕಾರ್ಯಾಚರಣೆಗೆ ತೊಡಕಾಗುತ್ತಿದೆ ಎನ್ನಲಾಗುತ್ತಿದೆ.
ಅಲ್ಲಿ ಸಿಲುಕಿಕೊಂಡವರನ್ನು ವಾಪಸ್ ಕರೆತರಲು ಸರ್ಕಾರ ಎಲ್ಲಾ ಸಾಧ್ಯತೆಗಳನ್ನು ಪರಿಶೀಲಿಸಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.