ಮಲಪ್ಪುರಂ: ಫುಟ್ ಬಾಲ್ ಟೂರ್ನಮೆಂಟ್ ವೇಳೆ ತಾತ್ಕಾಲಿಕವಾಗಿ ನಿರ್ಮಿಸಲಾದ ಗ್ಯಾಲರಿಯೊಂದು ಹಠಾತ್ ಕುಸಿತಗೊಂಡ ಹಿನ್ನೆಲೆಯಲ್ಲಿ ಸುಮಾರು 200 ಮಂದಿ ಗಾಯಗೊಂಡಿರುವ ಘಟನೆ ಮಲಪ್ಪುರಂ ಜಿಲ್ಲೆಯ ಪೂಂಗೊಡೆಯಲ್ಲಿ ಶನಿವಾರ ನಡೆದಿದೆ.
ಗಾಯಾಳುಗಳ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ಮಂಜೆರಿ ವೈದ್ಯಕೀಯ ಕಾಲೇಜ್ ಆಸ್ಪತ್ರೆ ಸೇರಿದಂತೆ ವಂದೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಫುಟ್ ಬಾಲ್ ಪಂದ್ಯಾವಳಿಯ ಫೈನಲ್ ಪಂದ್ಯದ ವೇಳೆಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾದ ಗ್ಯಾಲರಿ ಕುಸಿದು ಬಿದ್ದಿದೆ. ಘಟನೆ ನಡೆದಾಗ ಸುಮಾರು 3, 000 ಪ್ರೇಕ್ಷಕರು ಪಂದ್ಯ ವೀಕ್ಷಿಸಲು ಹಾಜರಿದ್ದರು ಎಂದು ವರದಿಗಳು ಹೇಳಿವೆ.ಲ