ನವಿ ಮುಂಬೈ: ಇಲ್ಲಿನ ಡಾ. ಡಿ. ವೈ. ಪಾಟೀಲ್ ಕ್ರೀಡಾ ಅಕಾಡೆಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 2022 ಟೂರ್ನಿಯ ಮೂರನೇ ಪಂದ್ಯದಲ್ಲಿ ಆರ್ ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡ ಉತ್ತಮ ಪ್ರದರ್ಶನ ತೋರಿದವು. ಆದಾಗ್ಯೂ, ಪಂಜಾಬ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ, ನಾಯಕ ಫಾಫ್ ಡು ಪ್ಲೆಸಿಸ್ 87 ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ 41 ರನ್, ದಿನೇಶ್ ಕಾರ್ತಿಕ್ 32 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 205 ಬೃಹತ್ ರನ್ ಪೇರಿಸಿತು. ಪಂಜಾಬ್ ಕಿಂಗ್ಸ್ ಪರ ರಾಹುಲ್ ಚಹರ್ ಹಾಗೂ ಅರ್ಷದೀಪ್ ಸಿಂಗ್ ತಲಾ 1 ವಿಕೆಟ್ ಕಬಳಿಸಿದರು.
ಆರ್ ಸಿಬಿ ನೀಡಿದ ಬೃಹತ್ ಮೊತ್ತವನ್ನು ಬೆನ್ನಟ್ಟಿದ್ದ ಪಂಜಾಬ್ ಕಿಂಗ್ಸ್ ಇಲೆವೆನ್ ತಂಡದ ಪರ ಭಾನುಕ ರಾಜಪಕ್ಸ 43, ಶಿಖರ್ ಧವನ್ 43 ಹಾಗೂ ಮಯಾಂಕ್ ಅಗರ್ವಾಲ್ 32 ರನ್ ಗಳ ನೆರವಿನಿಂದ ಐದು ವಿಕೆಟ್ ನಷ್ಟಕ್ಕೆ 208 ರನ್ ಗಳಿಸುವ ಮೂಲಕ ಐದು ವಿಕೆಟ್ ಅಂತರದಿಂದ ಆರ್ ಸಿಬಿ ಮಣಿಸಿತು.