ಬೆಂಗಳೂರು: ಬಜೆಟ್‌ನಲ್ಲಿ ಈ ಬಾರಿ ಕನ್ನಡ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ರೂ. 20 ಕೋಟಿ ಅನುದಾನ ಮೀಸಲಿಟ್ಟಿದ್ದಾರೆ.
ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕಾಸರಗೋಡು, ಅಕ್ಕಲಕೋಟೆ ಮತ್ತು ಗೋವಾದಲ್ಲಿ ಕನ್ನಡ ಭವನ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಸಂಸ್ಕೃತಿ-ಸಾಹಿತ್ಯ ಕ್ಷೇತ್ರಕ್ಕೆ ಘೋಷಿಸಿರುವ ಇತರ ಯೋಜನೆಗಳು ಹೀಗಿವೆ...
- ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆಗೆ ಕ್ರಮ, ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜನೆ
- ಕರ್ನಾಟಕದ ಹೆಸರಾಂತ ಸಾಹಿತಿಗಳ ಸಾಹಿತ್ಯ ಪ್ರಚಾರಕ್ಕೆ ಯೋಜನೆ, ಡಾ.ಸಿದ್ದಲಿಂಗಯ್ಯ, ಎಂ.ಚಿದಾನಂದಮೂರ್ತಿ, ಚನ್ನವೀರ ಕಣವಿ, ಡಾ.ಚಂದ್ರಶೇಖರ ಪಾಟೀಲ್ ಅವರ ಅಮೂಲ್ಯ ಸಾಹಿತ್ಯ ಪ್ರಚುರಪಡಿಸಲು ಯೋಜನೆ.
- ತುಳುಸಮುದಾಯದ ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಸಾಂಸ್ಕೃತಿಕ ಶಿಬಿರ, ಪ್ರತೀ ವಿಭಾಗ ಮಟ್ಟದಲ್ಲಿ ಒಟ್ಟು 4 ಸಾಂಸ್ಕೃತಿಕ ಶಿಬಿರ ಆಯೋಜನೆ
- ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ. ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ.