HEALTH TIPS

ಸ್ವಾತಂತ್ರ್ಯ ಯೋಧರ ಪಿಂಚಣಿ ಯೋಜನೆ 2026ರವರೆಗೆ ಮುಂದುವರಿಕೆ

      ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಅವರ ಮೇಲೆ ಅವಲಂಬಿತರಾದವರಿಗೆ ಪಿಂಚಣಿ ನೀಡುವ ನಿಟ್ಟಿನಲ್ಲಿ ₹3274.87 ಕೋಟಿ ಮೀಸಲಿಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹಣವನ್ನು 2025-26ರವರೆಗೆ ಸದ್ಬಳಕೆ ಮಾಡಬಹುದಾಗಿದೆ.
      ಕೇಂದ್ರ ಸರ್ಕಾರದ ಈ ಕ್ರಮದಿಂದ ಸ್ವತಂತ್ರ ಸೈನಿಕ ಸಮ್ಮಾನ್ ಯೋಜನೆಯಡಿ(ಎಸ್‌ಎಸ್‌ಎಸ್‌ವೈ) ಹಣಕಾಸು ನೆರವು ಪಡೆಯುವ ದೇಶದ 23,566 ಫಲಾನುಭವಿಗಳಿಗೆ ಅನುಕೂಲವಾಗಲಿದೆ.

      ಸ್ವತಂತ್ರ ಸೈನಿಕ ಸಮ್ಮಾನ್ ಯೋಜನೆ 2025-26ರವರೆಗೆ ಮುಂದುವರಿಸುವ ಮತ್ತು ಅದಕ್ಕಾಗಿ ₹3274.87 ಕೋಟಿ ಮೀಸಲಿಡುವ ಮಹತ್ವದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿದೆ. ಅಲ್ಲದೆ ಕೇಂದ್ರ ಸರ್ಕಾರದ ಈ ನಿರ್ಣಯವು ಆಜಾದಿ ಕಾ ಅಮೃತಮಹೋತ್ಸವದ ವರ್ಷದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವನ್ನು ನೆನೆಯುವ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಎಸ್‌ಎಸ್‌ಎಸ್‌ವೈ ಯೋಜನೆ ಮುಂದುವರಿಸುವ ಪ್ರಸ್ತಾವನೆಯನ್ನು ಕೇಂದ್ರ ಗೃಹ ಸಚಿವಾಲಯ ಸಿದ್ಧಪಡಿಸಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries