ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಮಾ.21ಕ್ಕೆ ದೇಶವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಘೋಷಿಸಿದೆ.
ಕನಿಷ್ಟ ಬೆಂಬಲ ಬೆಲೆ ಸಮಿತಿ ಸೇರಿದಂತೆ ನೀಡಿದ ಭರವಸೆಗಳನ್ನು ಈಡೇರಿಸದೇ ಇರುವುದು, ರೈತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ಹಲವು ವಿಷಯಗಳಲ್ಲಿ ತಮ್ಮ ಬೇಡಿಕೆಯನ್ನು, ಕೇಂದ್ರ ಸರ್ಕಾರದ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂಬುದು ಪ್ರತಿಭಟನೆಗೆ ಕಾರಣವಾಗಿದೆ.
ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿ ನಡೆದ ಸುದೀರ್ಘ ಸಭೆಯಲ್ಲಿ ಈ ನಿರ್ಧಾರವನ್ನು ರೈತ ಸಂಘಟನೆಗಳ ಒಕ್ಕೂಟ ಕೈಗೊಂಡಿದೆ.
"ರೈತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳಲ್ಲಿ ಯಾವುದೇ ಪ್ರಗತಿಯೂ ಕಂಡುಬಂದಿಲ್ಲ. ಆದ್ದರಿಂದ ಕೇಂದ್ರ ಸರ್ಕಾರದ ವಿರುದ್ಧ ಮಾ.21 ಕ್ಕೆ ಸಂಯುಕ್ತ ಕಿಸಾನ್ ಮೋರ್ಚಾದಿಂದ ರಾಷ್ಟ್ರವ್ಯಾಪಿ ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಸಲಾಗುತ್ತಿದೆ" ಎಂದು ಎಸ್ ಕೆಎಂ ನ ಸದಸ್ಯ ಅಭಿಮನ್ಯು ಕೋಹರ್ ಹೇಳಿದ್ದಾರೆ.