ತಿರುವನಂತಪುರ: ರಾಜ್ಯದಲ್ಲಿ ಇಂದು 2190 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರ್ನಾಕುಳಂ 405, ತಿರುವನಂತಪುರ 366, ಕೊಟ್ಟಾಯಂ 209, ಕೋಝಿಕ್ಕೋಡ್ 166, ತ್ರಿಶೂರ್ 166, ಕೊಲ್ಲಂ 165, ಇಡುಕ್ಕಿ 125, ಪತ್ತನಂತಿಟ್ಟ 118, ಮಲಪ್ಪುರಂ 109, ಕಣ್ಣೂರು 94, ಆಲಪ್ಪುಳ 87, ಪಾಲಕ್ಕಾಡ್ 87, ವಯನಾಡ್ 77, ಕಾಸರಗೊಡು 16 ಎಂಬಂತೆ ಸೋಂಕು ದೃಢಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 32,497 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 80,152 ಮಂದಿ ಜನರು ಕಣ್ಗಾವಲಿನಲ್ಲಿದ್ದಾರೆ. ಇವರಲ್ಲಿ 78,730 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ ಮತ್ತು 1422 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಒಟ್ಟು 214 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಸ್ತುತ, 17,105 ಕೊರೋನಾ ಪ್ರಕರಣಗಳಲ್ಲಿ, ಕೇವಲ 8.8 ಶೇಕಡಾ ಜನರು ಮಾತ್ರ ಆಸ್ಪತ್ರೆಗಳು /ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ ಮೂವರು ಮೃತರಾಗಿದ್ದಾರೆ. ಇದಲ್ಲದೆ, ಹಿಂದಿನ ದಿನಗಳಲ್ಲಿ ದಾಖಲೆಗಳನ್ನು ತಡವಾಗಿ ಸ್ವೀಕರಿಸಿದ ಕಾರಣ 72 ಸಾವುಗಳು ಮತ್ತು ಸುಪ್ರೀಂ ಕೋರ್ಟ್‌ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ್ದರಿಂದ 179 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 66,012ಕ್ಕೆ ಏರಿಕೆಯಾಗಿದೆ. ಇಂದು ಸೋಂಕು ಪತ್ತೆಯಾದವರಲ್ಲಿ 9 ಮಂದಿ ಹೊರ ರಾಜ್ಯದವರು. 2041 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 120 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು ಇಪ್ಪತ್ತು ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಪತ್ತೆಯಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 3878 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 633, ಕೊಲ್ಲಂ 197, ಪತ್ತನಂತಿಟ್ಟ 203, ಆಲಪ್ಪುಳ 211, ಕೊಟ್ಟಾಯಂ 434, ಇಡುಕ್ಕಿ 270, ಎರ್ನಾಕುಳಂ 632, ತ್ರಿಶೂರ್ 249, ಪಾಲಕ್ಕಾಡ್ 193, ಮಲಪ್ಪುರಂ 261, ಕೋಝಿಕ್ಕೋಡ್ 260, ವಯನಾಡ್ 134, ಕಣ್ಣೂರು 153, ಕಾಸರಗೋಡು 48 ಎಂಬಂತೆ ಗುಣಮುಖರಾಗಿದ್ದಾರೆ.