ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಭೇಟಿಯಾದ ಕೆಲವೇ ದಿನಗಳ ನಂತರ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ತಮ್ಮ ನಿವಾಸದಲ್ಲಿ ಜಿ-23 ಗುಂಪಿನ ಇತರ ಕೆಲವು ನಾಯಕರೊಂದಿಗೆ ಚರ್ಚೆ ನಡೆಸಿದರು.
ಜಿ-23 ಭಿನ್ನಮತೀಯ ಕಾಂಗ್ರೆಸ್ ನಾಯಕರ ಗುಂಪಾಗಿದ್ದು, ಅವರು ಸಾಂಸ್ಥಿಕ ಬದಲಾವಣೆಗೆ ಒತ್ತಾಯಿಸುತ್ತಿದ್ದಾರೆ.
ಇಂದು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಜಿ-23 ನಾಯಕರಲ್ಲಿ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಉಪನಾಯಕ ಆನಂದ್ ಶರ್ಮಾ ಮತ್ತು ಲೋಕಸಭೆ ಸಂಸದ ಮನೀಶ್ ತಿವಾರಿ ಸೇರಿದ್ದಾರೆ.
ಸೋನಿಯಾ ಗಾಂಧಿ ಅವರು ಮುಂದಿನ ದಿನಗಳಲ್ಲಿ ಜಿ-23ಯ ಇತರ ಕೆಲವು ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಮತ್ತೊಂದೆಡೆ, ಆಜಾದ್ ಅವರು ಗುಂಪಿನ ಇತರ ಕೆಲವು ನಾಯಕರನ್ನು ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಹೈಕಮಾಂಡ್ ಜಿ-23ರ ಸಲಹೆಗಳಿಗೆ ಮುಕ್ತವಾಗಿ ಸ್ವೀಕರಿಸುತ್ತದೆ ಮತ್ತು ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸುವ ಮತ್ತು ಪಕ್ಷವನ್ನು ಬಲಪಡಿಸುವ ನಿರ್ಣಯ ಮಾಡುವ ಪ್ರಯತ್ನದ ಭಾಗವಾಗಿ ಅವರನ್ನು ಭೇಟಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.