ಬೆಂಗಳೂರು: ಪ್ರವಾಸಿ ಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 238 ರನ್ ಗಳಿಂದ ಗೆಲುವು ಸಾಧಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ.
ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾದ 252 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಶ್ರೀಲಂಕಾ 109 ರನ್ ಗಳಿಗೆ ಆಲೌಟ್ ಆಗಿತ್ತು. 141 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾದ 303 ರನ್ ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು .
ಟೀಂ ಇಂಡಿಯಾ ನೀಡಿದ 447 ರನ್ ಗಳ ಗುರಿ ಬೆನ್ನಟ್ಟಿದ ಶ್ರೀಲಂಕಾ 208 ರನ್ ಗಳಿಗೆ ಆಲೌಟ್ ಆಯಿತು. ಈ ಮೂಲಕ ಟೀಂ ಇಂಡಿಯಾಗೆ 238 ರನ್ ಗಳಿಂದ ಶರಣಾಯಿತು.
ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ.