ತಿರುವನಂತಪುರಂ: ಉಕ್ರೇನ್ ಮತ್ತು ರಷ್ಯಾ ನಡುವಿನ ಸಮರವು ಪ್ರತಿ ರಾಷ್ಟ್ರವನ್ನು ಬೆಚ್ಚಿ ಬೀಳಿಸಿದೆ. ಓದು, ಉದ್ಯೋಗ ಎಂದು ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರಲ್ಲಿ 3,500 ಕೇರಳಿಗರು ಸಿಲುಕಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ತಿಳಿಸಿದ್ದಾರೆ.
ಉಕ್ರೇನ್ ನಲ್ಲಿ ಸಿಲುಕಿರುವ ಕೇರಳಿಗರ ತಕ್ಷಣದ ಸ್ಥಳಾಂತರಕ್ಕಾಗಿ ವಿದೇಶಾಂಗ ಸಚಿವಾಲಯವು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ವಿವರಗಳನ್ನು ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಸುಮಾರು 3,500 ಜನರು ಈಗಾಗಲೇ ನೋರ್ಕಾ ರೂಟ್ಸ್ ಕಂಟ್ರೋಲ್ ರೂಮ್‌ನಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಕೇರಳದ ಎಲ್ಲಾ ನಾಲ್ಕು ವಿಮಾನ ನಿಲ್ದಾಣಗಳು ಮತ್ತು ದೆಹಲಿ ಮತ್ತು ಮುಂಬೈಗೆ ಆಗಮಿಸುವ ವಲಸಿಗರನ್ನು ಸ್ವೀಕರಿಸಲು ನೋರ್ಕಾ(NORKA – Non Resident Keralites Affairs) ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದರು.
ಕೊಚ್ಚಿ ವಿಮಾನ ನಿಲ್ದಾಣದಿಂದ ವಿವಿಧ ಜಿಲ್ಲೆಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸಲು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
“ಉಕ್ರೇನ್‌ನಲ್ಲಿ ಸಿಲುಕಿರುವ ಮಲಯಾಳಿಗಳಿಗೆ ಸಹಾಯ ಮಾಡಲು ನೋರ್ಕಾ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ. ನಾವು ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ” ಎಂದು ನೋರ್ಕಾ ಟ್ವೀಟ್ ಮಾಡಿದೆ.