ತಿರುವನಂತಪುರ: ರಾಜ್ಯದಲ್ಲಿ ಇಂದು 424 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರ್ನಾಕುಳಂ 104, ಕೊಟ್ಟಾಯಂ 66, ತಿರುವನಂತಪುರ 56, ಪತ್ತನಂತಿಟ್ಟ 29, ತ್ರಿಶೂರ್ 28, ಕೊಲ್ಲಂ 27, ಕೋಝಿಕ್ಕೋಡ್ 25, ಇಡುಕ್ಕಿ 23, ಕಣ್ಣೂರು 18, ಆಲಪ್ಪುಳ 17, ಪಾಲಕ್ಕಾಡ್ 16, ಮಲಪ್ಪುರಂ 8 ಮತ್ತು ವಯನಾಡ್ 7 ಮತ್ತು ಕಾಸರಗೋಡು ಶ||ಊನ್ಯ ಎಂಬಂತೆ ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 17,846 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 13,569 ಮಂದಿ ಜನರು ಕಣ್ಗಾವಲಿನಲ್ಲಿದ್ದಾರೆ. ಇವರಲ್ಲಿ 13,259 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದಾರೆ ಮತ್ತು 310 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. 55 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ, 3555 ಕೊರೋನಾ ಪ್ರಕರಣಗಳಲ್ಲಿ, ಕೇವಲ 10.7 ಶೇ. ಮಂದಿ ಜನರು ಆಸ್ಪತ್ರೆಗಳು / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ ಯಾರೂ ಮೃತರಾಗಿಲ್ಲ. ಇದಲ್ಲದೆ, ಹಿಂದಿನ ದಿನಗಳಲ್ಲಿ ದಾಖಲೆಗಳನ್ನು ತಡವಾಗಿ ಸ್ವೀಕರಿಸಿದ ಕಾರಣ ಆರು ಸಾವುಗಳು ಮತ್ತು ಸುಪ್ರೀಂ ಕೋರ್ಟ್‍ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ್ದರಿಂದ 16 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 67,844ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ 28 ಮಂದಿ ಹೊರ ರಾಜ್ಯದವರು. ಸಂಪರ್ಕದಿಂದ 358 ಮಂದಿ ಜನರಿಗೆ ಸೋಂಕು ತಗುಲಿದೆ. 35 ಮಂದಿಯ ಸಂಪರ್ಕದ ಮೂಲ ಸ್ಪಷ್ಟವಾಗಿಲ್ಲ. ಇಂದು ಮೂವರು ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಪತ್ತೆಯಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 528 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 79, ಕೊಲ್ಲಂ 9, ಪತ್ತನಂತಿಟ್ಟ 29, ಆಲಪ್ಪುಳ 5, ಕೊಟ್ಟಾಯಂ 78, ಇಡುಕ್ಕಿ 48, ಎರ್ನಾಕುಳಂ 110, ತ್ರಿಶೂರ್ 43, ಪಾಲಕ್ಕಾಡ್ 3, ಮಲಪ್ಪುರಂ 19, ಕೋಝಿಕ್ಕೋಡ್ 62, ವಯನಾಡ್ 8, ಕಣ್ಣೂರು 31 ಮತ್ತು ಕಾಸರಗೋಡು 4 ಮಂದಿ ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 3555 ಮಂದಿ ಜನರಿಗೆ ರೋಗ ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 64,59,585 ಮಂದಿ ಜನರು ಕೊರೋನಾದಿಂದ ಮುಕ್ತರಾಗಿದ್ದಾರೆ.