ನವದೆಹಲಿ: ಉತ್ತರ ಪ್ರದೇಶ ಸೇರಿದಂತೆ ಸದ್ಯ ವಿಧಾನಸಭೆ ಚುನಾವಣೆ ಮುಕ್ತಾಯವಾಗಿರುವ ಐದು ರಾಜ್ಯಗಳಲ್ಲಿ, ಕೋವಿಡ್-19 ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಪ್ರಕಟಿಸುವುದನ್ನು ಪುನರಾರಂಭಿಸಲು ಕೇಂದ್ರ ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ, ಪಂಜಾಬ್ ಮತ್ತು ಮಣಿಪುರದಲ್ಲಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಜನವರಿ 8ರಿಂದ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿಯವರ ಚಿತ್ರವನ್ನು ತೆಗೆಯಲಾಗಿತ್ತು.
ಈ ಐದು ರಾಜ್ಯಗಳಲ್ಲಿ ಆದ್ಯತೆಯ ಮೇರೆಗೆ ಕೋವಿಡ್ ಲಸಿಕಾ ಪ್ರಮಾಣಪತ್ರದಲ್ಲಿ ಮೋದಿಯವರ ಚಿತ್ರವನ್ನು ಮುದ್ರಿಸುವ ಇರಾದೆಯನ್ನು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಹೊಂದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
'ಈ ಐದು ರಾಜ್ಯಗಳ ಜನರಿಗೆ ನೀಡಲಾಗುವ ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೊವನ್ನು ಸೇರಿಸಲು ಕೋವಿನ್ ಪೋರ್ಟಲ್‌ನಲ್ಲಿ ಅಗತ್ಯ ಬದಲಾವಣೆಯನ್ನು ಮಾಡಲಾಗುವುದು' ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.