HEALTH TIPS

ಅಮೃತಸರ: ಬಿಎಸ್‌ಎಫ್ ಜವಾನನಿಂದ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ, 5 ಸೈನಿಕರು ಸಾವು

         ಅಮೃತಸರ: ಪಂಜಾಬ್‌ನ ಅಮೃತಸರದ ಫೋರ್ಸ್ ಕ್ಯಾಂಪ್‌ನಲ್ಲಿ ಭಾನುವಾರ ಬಿಎಸ್ಎಫ್ ಜವಾನ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಗಡಿ ಭದ್ರತಾ ಪಡೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

           ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಅಟ್ಟಾರಿ-ವಾಘಾ ಗಡಿ ದಾಟುವಿಕೆಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಖಾಸಾ ಪ್ರದೇಶದ ಫೋರ್ಸ್ ಮೆಸ್‌ನಲ್ಲಿ ಈ ಘಟನೆ ನಡೆದಿದೆ.

          ಗುಂಡಿನ ದಾಳಿ ನಡೆಸಿದ ಜವಾನ ಸೇರಿದಂತೆ ಐವರು ಯೋಧರ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ ಎನ್ನಲಾಗಿದೆ.

              ಗಡಿ ಭದ್ರತಾ ಪಡೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅವರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries