ಹುಬ್ಬಳ್ಳಿ: ಕೋವಿಡ್ ಕಾರಣದಿಂದ ವಿಳಂಬಗೊಂಡದ್ದ 86ನೇ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮೇ ತಿಂಗಳಿನಲ್ಲಿ ಹಾವೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
2021ರ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಸಾಹಿತ್ಯ ಸಮ್ಮೇಳನವವನ್ನು ಕೊವಿಡ್-19ರ ಸಾಂಕ್ರಾಮಿಕ ಪಿಡುಗಿನ ಕಾರಣದಿಂದಾಗಿ ಮುಂದೂಡಲಾಗಿತ್ತು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಮಾತನಾಡಿ, ಸಮ್ಮೇಳನಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಅದ್ಧೂರಿಯಾಗಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.