ನವದೆಹಲಿ: ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಗೆ ಅಗತ್ಯವಿರುವ ಸರಿಸುಮಾರು ಶೇ. 89 ರಷ್ಟು ಭೂಮಿಯನ್ನು ಕೇಂದ್ರ ಸರ್ಕಾರ ಸ್ವಾಧೀನಪಡಿಸಿಕೊಂಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬುಧವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
"ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಯೋಜನೆಯು ವಿಶೇಷವಾಗಿ ಮಹಾರಾಷ್ಟ್ರ ರಾಜ್ಯದಲ್ಲಿ ಭೂಸ್ವಾಧೀನ ವಿಳಂಬದಿಂದಾಗಿ ವಿಳಂಬವಾಗುತ್ತಿದೆ. ಇದರ ಪರಿಣಾಮ ಒಪ್ಪಂದಗಳ ಅಂತಿಮಗೊಳಿಸುವಿಕೆ ಮತ್ತು ಅಔಗಿIಆ-19 ರ ಪ್ರತಿಕೂಲ ಪರಿಣಾಮದಿಂದಾಗಿ ಯೋಜನೆ ವಿಳಂಬವಾಗುತ್ತಿದೆ" ಎಂದು ಸಚಿವರು ತಮ್ಮ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಎಂಎಎಚ್‌ಎಸ್‌ಆರ್ ಯೋಜನೆಗೆ ಅಗತ್ಯವಿರುವ ಒಟ್ಟು 1,396 ಹೆಕ್ಟೇರ್ ಭೂಮಿಯಲ್ಲಿ ಸುಮಾರು ಶೇ. 89 ರಷ್ಟು ಅಂದರೆ, 1,248 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ರೈಲ್ವೆ ಸಚಿವರು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಯೋಜನೆಗೆ ಅಗತ್ಯವಿರುವ ಒಟ್ಟು 297.81 ಹೆಕ್ಟೇರ್‌ಗಳಲ್ಲಿ ಶೇ. 68.65 ರಷ್ಟು ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
"ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಐದು ಗ್ರಾಮಗಳು ಗ್ರಾಮಸಭೆಗಳಲ್ಲಿ ಎಂಎಎಚ್ಎಸ್ಆರ್ ಯೋಜನೆಗಾಗಿ ಭೂಸ್ವಾಧೀನವನ್ನು ವಿರೋಧಿಸಿ ಪ್ರಸ್ತಾವನೆ ಅಂಗೀಕರಿಸಿವೆ" ಸಚಿವರು ತಿಳಿಸಿದರು.