ನವದೆಹಲಿ: ಮಹಾರಾಷ್ಟ್ರ ಮತ್ತು ಕೇರಳ ಸೇರಿದಂತೆ ಒಂಭತ್ತು ರಾಜ್ಯಗಳು ಪೆಟ್ರೋಲ್ ಹಾಗೂ ಡೀಸೆಲ್ ಇಂಧನ ಮೇಲಿನ ವ್ಯಾಟ್ ಅನ್ನು ಇಳಿಕೆ ಮಾಡಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಹೇಳಿದರು.
ನವದೆಹಲಿ: ಮಹಾರಾಷ್ಟ್ರ ಮತ್ತು ಕೇರಳ ಸೇರಿದಂತೆ ಒಂಭತ್ತು ರಾಜ್ಯಗಳು ಪೆಟ್ರೋಲ್ ಹಾಗೂ ಡೀಸೆಲ್ ಇಂಧನ ಮೇಲಿನ ವ್ಯಾಟ್ ಅನ್ನು ಇಳಿಕೆ ಮಾಡಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಹೇಳಿದರು.
ರಾಜ್ಯಸಭೆಗೆ ಮಾಹಿತಿ ನೀಡಿದ ಅವರು, ಅನೇಕ ದೇಶಗಳಲ್ಲಿ ಇಂಧನ ಬೆಲೆ ಶೇ 50ಕ್ಕಿಂತ ಹೆಚ್ಚಾಗಿದೆ. ಆದರೆ ಭಾರತದಲ್ಲಿ ಇವುಗಳ ಬೆಲೆಯಲ್ಲಿ ಸ್ಥಿರತೆ ಇದೆ. ಕೋವಿಡ್ ಪಿಡುಗಿನ ಸಮಯದಲ್ಲಿ ಮಾತ್ರ ಶೇ 5 ರಷ್ಟು ಏರಿಕೆಯಾಗಿದೆ ಎಂದು ಅವರು ತಿಳಿಸಿದರು.
'ಆ ಸಮಯದ ಪರಿಸ್ಥಿತಿಗೆ ಅನುಗುಣವಾಗಿ ತೆರಿಗೆ ಹೆಚ್ಚಿಸಲಾಗುತ್ತದೆ. ಅಂತೆಯೇ ಸಾಂಕ್ರಾಮಿಕದ ಸಂದರ್ಭದಲ್ಲಿ ಇಂಧನ ಬೆಲೆಯಲ್ಲಿ ಸ್ವಲ್ಪ ಹೆಚ್ಚಳವಾಯಿತು. ಆದರೆ ನಂತರ ಕಡಿಮೆ ಮಾಡಲಾಯಿತು' ಎಂದು ಪ್ರಶ್ನೋತ್ತರ ಅವಧಿಯಲ್ಲಿ ಪೂರಕ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
'ನಾವು ಕೇಂದ್ರೀಯ ಅಬಕಾರಿ ಸುಂಕ, ತೈಲ ಬೆಲೆಯನ್ನು ಇಳಿಕೆ ಮಾಡಿದ್ದೇವೆ. ಆದರೆ ಕೇರಳ, ಮಹಾರಾಷ್ಟ್ರ ಸೇರಿದಂತೆ ಒಂಭತ್ತು ರಾಜ್ಯಗಳು ಇನ್ನೂ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿಮೆ ಮಾಡಿಲ್ಲ. ಇಂಧನ ಬೆಲೆಯನ್ನು ನಿಯಂತ್ರಿಸಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಲು ನಾವು ಸಿದ್ಧರಿದ್ದೇವೆ' ಎಂದು ಅವರು ಹೇಳಿದರು.