ಲಕ್ನೊ/ಛತ್ತೀಸ್ ಗಢ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ನೇತೃತ್ವದ ಮೈತ್ರಿಕೂಟಕ್ಕಿಂತ ಬಿಜೆಪಿ ಮುಂದಿದೆ. R ಈ ಮೂಲಕ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಮತ್ತೊಂದು ಅತಿದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಅಧಿಕಾರ ಹಿಡಿಯುವತ್ತ ದಾಪುಗಾಲು ಇಡುತ್ತಿದೆ.
ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಮುಂಚೂಣಿಯಲ್ಲಿದ್ದು, ಆಡಳಿತಾರೂಢ ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ಕುಸಿದಿದೆ. ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ನ್ನು ಆಪ್ ಪಕ್ಷ ತಲುಪಿದೆ.
ಉತ್ತರ ಪ್ರದೇಶದಲ್ಲಿ ಸದ್ಯ ಬಿಜೆಪಿ 109 ಸ್ಥಾನಗಳಲ್ಲಿ ಮುನ್ನಡೆ, ಎಸ್ ಪಿ 68 ಕ್ಷೇತ್ರಗಳಲ್ಲಿ, ಬಿಎಸ್ ಪಿ 2 ಕ್ಷೇತ್ರಗಳಲ್ಲಿ ಮತ್ತು ಇತರರು 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ 19 ಸ್ಥಾನಗಳಲ್ಲಿ, ಆಪ್ 35 ಸ್ಥಾನಗಳಲ್ಲಿ, ಬಿಜೆಪಿ 2 ಸ್ಥಾನಗಳಲ್ಲಿ ಮತ್ತು ಶಿರೋಮಣಿ ಅಕಾಲಿ ದಳ 8 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
ಗೋವಾ ಮತ್ತು ಉತ್ತರಾಖಂಡದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಹಣಾಹಣಿಯಿದೆ.