ನವದೆಹಲಿ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ನಡೆದ 10 ಮಂದಿ ಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಾತಾಡಿದ್ದಾರೆ.
ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಾ ಪ್ರಕರಣದಲ್ಲಿ ತಪ್ಪಿತಸ್ಥರನ್ನ ಬಂಧಿಸಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.
'ಪ್ರಕರಣದಲ್ಲಿ ಆರೋಪಿಗಳ ಬಗ್ಗೆ ಪಶ್ಚಿಮಬಂಗಾಳ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವಿದೆ. ಇಂತಹ ಘಟನೆಗಳನ್ನ ಪ್ರಚೋದಿಸುವವರನ್ನ ಎಂದೂ ಕ್ಷಮಿಸಲಾಗದು' ಎಂದಿದ್ದಾರೆ.
ಬಿರ್ಭುಮ್ ಜಿಲ್ಲೆಯ ರಾಂಪುರ್ ಹತ್ ನಲ್ಲಿ ಕೆಲ ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಮೃತಪಟ್ಟಿದ್ದರು. ಈ ಪ್ರಕರಣ ದಿನೇ ದಿನೇ ರಾಜಕೀಯಕ್ಕೆ ತಿರುಗಿದ್ದು ಬಿಜೆಪಿ ಮತ್ತು ಟಿಎಂಸಿ ನಡುವಿನ ಗುದ್ದಾಟಕ್ಕೆ ಕಾರಣವಾಗಿದೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ ಪಶ್ಚಿಮಬಂಗಾಳ ಸರ್ಕಾರಕ್ಕೆ ವರದಿ ಕೇಳಿದೆ. ಬಂಗಾಳ ಬಿಜೆಪಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಒತ್ತಾಯಿಸಿದೆ.