ಮುಳ್ಳೇರಿಯ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ವಾರ್ತಾ ಕಛೇರಿ ಹಾಗೂ ಕಾರಡ್ಕ ಬ್ಲಾಕ್ ಪಂಚಾಯತ್ ವತಿಯಿಂದ ನಿನ್ನೆ ಕರ್ಮಂತೋಡಿಯಲ್ಲಿ ಕಾರಡ್ಕ ಅರಣ್ಯ ಸತ್ಯಾಗ್ರಹದ ಸ್ಮರಣಾರ್ಥ ಜಿಲ್ಲಾ ಮಟ್ಟದ ಸಂಭ್ರಮಾಚರಣೆ ಕಾರ್ಯಕ್ರಮವನ್ನು ರಾಜ್ಯ ಪುರಾತತ್ವ ಮತ್ತು ವಸ್ತು ಸಂಗ್ರಹಾಲಯಗಳ ಸಚಿವ ಅಹ್ಮದ್ ದೇವರ ಕೋವಿಲ್ ಆನ್ ಲೈನ್ ಮೂಲಕ ಉದ್ಘಾಟಿಸಿದರು. ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಅಹರ್ನಿಶಿ ಕಂಡ ಕನಸುಗಳ ಫಲವೇ ನಾವಿಂದು ಅನುಭವಿಸುವ ಸ್ವಾತಂತ್ರ್ಯವಾಗಿದೆ. ಅದನ್ನು ನಿರ್ಲಕ್ಷಿಸುವ ಯೋಜಿತ ನಡೆ ನಡೆಯುತ್ತಿರುವ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟದ ನೆನಪುಗಳು ಕೂಡ ಹೋರಾಟವಾಗಿದೆ ಎಂದು ಸಚಿವರು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎನ್.ಎ.ನೆಲ್ಲಿಕುನ್ನು ವಹಿಸಿದ್ದರು. ಸಂಸದ ರಾಜಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿದ್ದರು. ಕಾರಡ್ಕ ಅರಣ್ಯ ಸತ್ಯಾಗ್ರಹದಂತಹ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಮರೆಯಾಗದ ಘಟನೆಗಳು ಮುಂದಿನ ಪೀಳಿಗೆಗೆ ಸಾಕ್ಷಿಯಾಗಲಿವೆ ಎಂದು ಹೇಳಿದರು.
ಖ್ಯಾತ ಸಾಹಿತಿ, ಇತಿಹಾಸಕಾರ ಕರಿವೆಳ್ಳೂರು ಮುರಳಿ ಸಾಂಸ್ಕøತಿಕ ಉಪನ್ಯಾಸ ನೀಡಿದರು.
ಶಾಸಕ ಇ ಚಂದ್ರಶೇಖರನ್ ಮುಖ್ಯ ಅತಿಥಿಯಾಗಿದ್ದರು. ಬ್ಲಾಕ್ ಪಂಚಾಯತ್ ಅಸೋಸಿಯೇಶನ್ ಅಧ್ಯಕ್ಷ ಕೆ.ಮಣಿಕಂಠನ್, ಗ್ರಾಮ ಪಂಚಾಯತ್ ಅಸೋಸಿಯೇಶನ್ ಕಾರ್ಯದರ್ಶಿ ಅಡ್ವ ಎ.ಪಿ.ಉಷಾ, ಕಾರಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಗೋಪಾಲಕೃಷ್ಣ, ಬೇಡಗ ಪಂಚಾಯತ್ ಅಧ್ಯಕ್ಷ ಎಂ.ಎಸ್. ಧನ್ಯ, ಕುಂಬ್ಡಾಜೆ ಪಂಚಾಯಿತಿ ಅಧ್ಯಕ್ಷ ಹಮೀದ್ ಪೆÇಸಳಿಗೆ ಮತ್ತು ಬೆಳ್ಳೂರು ಪಂಚಾಯಿತಿ ಅಧ್ಯಕ್ಷ ಎಂ. ಶ್ರೀಧರ, ಮುಳಿಯಾರು ಪಂಚಾಯಿತಿ ಅಧ್ಯಕ್ಷ ಪಿ.ವಿ ಮಿನಿ,ಕಾರಡ್ಕ ಬ್ಲಾಕ್ ಪಂಚಾಯತ್ ಉಪಾಧ್ಯಕ್ಷೆ ಕೆ.ರಮಣಿ, ಕಾರಡ್ಕ ಬ್ಲಾಕ್ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಕೆ. ನಾರಾಯಣನ್, ಆರೋಗ್ಯ ಶಿಕ್ಷಣ ಸಮಿತಿ ಅಧ್ಯಕ್ಷ ಪಿ. ಸವಿತಾ, ಅಭಿವೃದ್ದಿ ಸಮಿತಿ ಅಧ್ಯಕ್ಷೆ ಸ್ಮಿತಾ ಪ್ರಿಯರಂಜನ್, ಬ್ಲಾಕ್ ಪಂಚಾಯಿತಿ ಸದಸ್ಯ ಎಂ.ಕುಂಞಂಬು ನಾಯರ್, ಕಾರಡ್ಕ ಪಂಚಾಯಿತಿ ಸದಸ್ಯ ಎಂ.ತಂಬಾನ್, ಬ್ಲಾಕ್ ಪಂಚಾಯಿತಿ ಕಾರ್ಯದರ್ಶಿ ಶೀಬಾ ಮಾತನಾಡಿದರು. ಕಾರಡ್ಕ ಬ್ಲಾಕ್ ಪಂಚಾಯತ್ ಅಧ್ಯಕ್ಷ ಸಿ.ಜಿ.ಮ್ಯಾಥ್ಯೂ ಸ್ವಾಗತಿಸಿ, ಜಿಲ್ಲಾ ಮಾಹಿತಿ ಅಧಿಕಾರಿ ಮಧುಸೂದನನ್ ವಂದಿಸಿದರು.
ಕಾರಡ್ಕ ಅರಣ್ಯ ಸತ್ಯಾಗ್ರಹಕ್ಕೆ ಸಂಬಂಧಿಸಿದಂತೆ ಕಾರಡ್ಕ ಜಿವಿಎಚ್‍ಎಸ್ ಅತ್ಯುತ್ತಮ ಯೋಜನೆಯನ್ನು ಸಿದ್ಧಪಡಿಸಿದೆ. ಕಾರ್ಯಕ್ರಮದಲ್ಲಿ ಎಸಿ ವಿದ್ಯಾರ್ಥಿಗಳು ಹಾಗೂ ಯೋಜನೆಯ ನೇತೃತ್ವ ವಹಿಸಿದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಬಳಿಕ ಸಂಗೀತ ರಸಮಂಜರಿ, ಜಾನಪದ ಕಲಾ ಸಂಜೆ ಹಾಗೂ ಸೂಫಿ ಸಂಗೀತ ಕಾರ್ಯಕ್ರಮ ಜರುಗಿತು.