HEALTH TIPS

ಪ್ರಧಾನಿ ಮೋದಿ ಭೇಟಿ ಮಾಡಿದ ಯೋಗಿ, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ

             ನವದೆಹಲಿ: ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ದೆಹಲಿ ಪ್ರವಾಸದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.

           ಸದ್ಯ ಇಬ್ಬರು ನಾಯಕರ ಮಧ್ಯೆ ಸಭೆ ಮುಂದುವರಿದಿದ್ದು, ಯುಪಿ ಚುನಾವಣೆಯಲ್ಲಿ ಜಯಗಳಿಸಿದ ಯೋಗಿ ಆದಿತ್ಯನಾಥ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದರು. ಈ ವೇಳೆ ಯೋಗಿ ಆದಿತ್ಯನಾಥ್ ಅವರು ತಮ್ಮ ಪ್ರಮಾಣವಚನ ಸಮಾರಂಭಕ್ಕೆ ಪ್ರಧಾನಿಗೆ ಆಹ್ವಾನವನ್ನೂ ನೀಡಿದರು ಎನ್ನಲಾಗಿದೆ.

               ಈ ಸಭೆಯಲ್ಲಿ ಉತ್ತರ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹಾಗೂ ನೂತನ ಸಚಿವ ಸಂಪುಟಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾತುಕತೆಯೂ ನಡೆಯುತ್ತಿದೆ.

               ಪ್ರಧಾನಿ ಭೇಟಿಗೂ ಮುನ್ನ ಯೋಗಿ ಆದಿತ್ಯನಾಥ್ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದರು. ಈ ವೇಳೆ ಸಿಎಂ ಯೋಗಿ ಯುಪಿ ಚುನಾವಣೆ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಉಪರಾಷ್ಟ್ರಪತಿಗೆ ಮಾಹಿತಿ ನೀಡಿದರು. ಇದಕ್ಕೂ ಮೊದಲು ಯೋಗಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಮತ್ತು ಕೇಂದ್ರ ಸಚಿವ ಸರ್ಬಾನಂದ ಸೋನೆವಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

                            ಇಂದು  ಅಮಿತ್ ಶಾ ಭೇಟಿ

           ಸದ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ಪ್ರವಾಸದಲ್ಲಿರುವುದರಿಂದ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಅಂದರೆ ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಭೇಟಿ ಬಳಿಕ ಯೋಗಿ, ಸಂಜೆ 6 ಗಂಟೆಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ರಾತ್ರಿ 8 ಗಂಟೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

                             ಯಾರಿಗೆ ಹೊಡೆಯಲಿದೆ ಲಕ್?

                ಕನೌಜ್‌ನಿಂದ ಹೊಸದಾಗಿ ಚುನಾಯಿತ ಸಂಸದ ಮತ್ತು ಮಾಜಿ ಎಡಿಜಿ ಅಸಿಮ್ ಅರುಣ್, ಆಗ್ರಾ ಗ್ರಾಮಾಂತರದಿಂದ ಹೊಸದಾಗಿ ಚುನಾಯಿತ ಶಾಸಕ ಮತ್ತು ಉತ್ತರಾಖಂಡದ ಮಾಜಿ ರಾಜ್ಯಪಾಲ ಬೇಬಿರಾಣಿ ಮೌರ್ಯ, ಜಾರಿ ನಿರ್ದೇಶನಾಲಯದ ಮಾಜಿ ಜಂಟಿ ನಿರ್ದೇಶಕಿ ಮತ್ತು ಸರೋಜಿನಿ ನಗರದಿಂದ ಹೊಸದಾಗಿ ಚುನಾಯಿತರಾದ ಶಾಸಕ ರಾಜೇಶ್ವರ್ ಸಿಂಗ್ ಅವರು ಸಂಪುಟದಲ್ಲಿ ಸ್ಥಾನ ಪಡೆಯಬಹುದು. ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಹಾಗೂ ಎಂಎಲ್ ಸಿ ಅರವಿಂದ್ ಕುಮಾರ್ ಶರ್ಮಾ ಅವರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳವ ಸಾಧ್ಯತೆ ಇದೆ. ಇನ್ನು ನಿಶಾದ್ ಪಕ್ಷದ ಅಧ್ಯಕ್ಷ ಸಂಜಯ್ ನಿಶಾದ್ ಅವರೊಂದಿಗೆ ಯೋಗಿ ಸರ್ಕಾರದ ಸಂಪುಟದಲ್ಲಿ ಅಪ್ನಾ ದಳದ ಶಾಸಕರು ಕೂಡ ಸ್ಥಾನ ಪಡೆಯಲಿದ್ದಾರೆ. ಎರಡೂ ಮಿತ್ರಪಕ್ಷಗಳಿಂದ ಒಂದರಿಂದ ಇಬ್ಬರನ್ನು ಮಂತ್ರಿ ಮಾಡಬಹುದಾಗಿದೆ.

                              ಉಪ ಮುಖ್ಯಮಂತ್ರಿ ಸ್ಥಾನ?

                ಬಿಜೆಪಿಯ ಬೃಹತ್ ವಿಜಯದ ನಂತರ ಉತ್ತರ ಪ್ರದೇಶದ ಹೊಸ ಸಚಿವ ಸಂಪುಟಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವೆ ಮಾತುಕತೆ ಪ್ರಾರಂಭವಾಗಿದೆ. ಯೋಗಿ ಸರ್ಕಾರದ 2ನೇ ಇನ್ನಿಂಗ್ಸ್ ನಲ್ಲಿ ಉಪಮುಖ್ಯಮಂತ್ರಿ ಹುದ್ದೆ ಇರಬೇಕೆ ಅಥವಾ ಬೇಡವೇ ಎಂಬ ತೀರ್ಮಾನವೂ ದೆಹಲಿಯಲ್ಲಿಯೇ ನಿರ್ಧಾರವಾಗಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries